ಹಾಸನ

ಸಮಾಜ ಸ್ವಾಸ್ಥ್ಯಕ್ಕೆ ಶ್ರಮಿಸಿದ ದಾರ್ಶನಿಕ

Published On :

ಚನ್ನರಾಯಪಟ್ಟಣ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ಹಾಗೂ ತಾಲೂಕು ಕುರುಬರ ಸಂಘದ ವತಿಯಿಂದ 526ನೇ ಕನಕ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳು  ವಾಹನಗಳಲ್ಲಿ ಹಲವು ಸ್ತಬ್ಧ ಚಿತ್ರಗಳನ್ನು ಪ್ರದರ್ಶಿಸಿದರೆ, ರೈತ ಸಂಘದ ಕಾರ್ಯಕರ್ತರು ಎತ್ತಿನಗಾಡಿ ಮೆರವಣಿಗೆ ನಡೆಸಿದರು.
ಪಟ್ಟಣದ ಮಾಧ್ಯಮಿಕ ಶಾಲಾ ಆವರಣದಿಂದ ಕನಕರ ಭಾವಚಿತ್ರವನ್ನೊಳಗೊಂಡ ಅಲಂಕೃತ ವಾಹನದೊಂದಿಗೆ ತಾಲೂಕಿನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಬಿ.ಎಂ ರಸ್ತೆ, ಮೈಸೂರು ರಸ್ತೆಯಲ್ಲಿ ಮೆರವಣಿಗೆ ತಾಲೂಕು ಕಚೇರಿವರೆಗೆ ಸಾಗಿತು.
ಸಾಮಾಜಿಕ ಕಾರ್ಯಕರ್ತ ಲೋಕೇಶ್‌ದಾಸ್ ಮಾತನಾಡಿ ಕನಕರ ಆದರ್ಶ ಇಂದಿಗೂ ಎಲ್ಲರಿಗೂ ಅಗತ್ಯವಿದ್ದು, ಅವರು ನೀಡಿದ ತತ್ವಗಳನ್ನು ನಾವು ಪಾಲಿಸಿಕೊಂಡು ಹೋಗಬೇಕು ಎಂದು ತಿಳಿಸಿದರು.
ಕನಕರು ಕೇವಲ ಜಾತಿಯತೆ ವಿರೋಧಿಸಲಿಲ್ಲ. ಅವರು ಉತ್ತಮ ಸಾಹಿತ್ಯವನ್ನು ನಾಡಿಗೆ ನೀಡಿದ್ದು, ಇಂದಿಗೂ ಅವರ ಸಾಹಿತ್ಯವನ್ನು ಅರ್ಥಮಾಡಿಕೊಂಡರೆ ಮನಸ್ಸಿನಲ್ಲಿ ಯಾವುದೇ ಕಲ್ಮಶವಿರುವುದಿಲ್ಲ ಎಂದು ತಿಳಿಸಿದರು.
ಶಾಸಕ ಬಾಲಕೃಷ್ಣ ಮಾತನಾಡಿ ಕನಕರು ಸಮಾಜದ ಅಂಕು ಡೊಂಕುಗಳನ್ನು ತಿದ್ದಲು ಅವರು ಕೀರ್ತನೆಗಳನ್ನು ರಚಿಸಿ ಹಾಡುವುದರ ಮುಖೇನ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಮುಂದಾದರು ಎಂದು ತಿಳಿಸಿದರು.
ತಾಲೂಕಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕನಕ ಸಮುದಾಯ ಭವನಕ್ಕೆ 25ಲಕ್ಷ ರು.ಗಳನ್ನು ನೀಡಲಾಗುವುದು ಎಂದು ಹೇಳಿದರು.
ತಾಪಂ ಅಧ್ಯಕ್ಷೆ ಹೇಮಾವತಿ, ತಹಸೀಲ್ದಾರ್ ಡಾ.ನಾಗರಾಜುಸ ಸೋಮಶೇಖರ್, ಜಿಪಂ ಸದಸ್ಯ ಶಿವಶಂಕರ್‌ಕುಂಠೆ, ಕುಸುಮಾ ಬಾಲಕೃಷ್ಣ, ದೇವಿಕಾ ಪ್ರಕಾಶ್ ಪುರಸಭಾಧ್ಯಕ್ಷ ಮಂಜಣ್ಣ, ತಾಲೂಕು ಕಸಾಪ ಅಧ್ಯಕ್ಷ ಲೋಕೇಶ್, ತಾಪಂ ಉಪಾಧ್ಯಕ್ಷೆ ಶಿಲ್ಪಾಶ್ರೀನಿವಾಸ್,  ತಾಲೂಕು ಕುರುಬರ ಸಂಘದ ಅಧ್ಯಕ್ಷ ಕಬ್ಬಾಳು ರಮೇಶ್,  ಗೌರವಾಧ್ಯಕ್ಷ ಎಂ.ಕೆ ಮಂಜೇಗೌಡ,  ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮೋಹನ್‌ಕುಮಾರ್, ತಾಪಂ ಸದಸ್ಯ ಬಸವರಾಜು, ತಾಪಂ ಇಒ ಮೃತ್ಯುಂಜಯ,  ಉಪಸ್ಥಿತರಿದ್ದರು.
ಈ  ಸಂದರ್ಭದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸಮಾಜದ ವಿವಿದ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಸನ್ಮಾನಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.