ಹಾಸನ

ಶಾಲಾ ದಾಖಲಾತಿಗೆ ವೇಳಾ ಪಟ್ಟಿ ಪ್ರಕಟ

Published On :

ಹಾಸನ: ಶಿಕ್ಷಣ ಹಕ್ಕು ಅಧಿನಿಯಮ ಪ್ರಕಾರ 2014-15ನೇ ಸಾಲಿಗೆ 1ನೇ ತರಗತಿ ಅಥವಾ ಪೂರ್ವ ಪ್ರಾಥಮಿಕ ತರಗತಿಗೆ ಮಕ್ಕಳನ್ನು ದಾಖಲು ಮಾಡಿಕೊಳ್ಳಲು ಶಿಕ್ಷಣ ಹಕ್ಕು ಕಾಯಿದೆ ಸೆಕ್ಷನ್ 12(1)(ಸಿ) ಪ್ರಕಾರ ಶೇ.25 ಸೀಟುಗಳಿಗೆ ಎದುರಾಗಿ ದಾಖಲಾತಿ ಕೋರಿ ಇಲಾಖೆ ನಿಗಧಿ ಪಡಿಸಿದಂತೆ ಪೋಷಕರು ಅರ್ಜಿ ಸಲ್ಲಿಸಬಹುದಾಗಿದೆ. ರು. 3.50 ಲಕ್ಷದವರೆಗೆ ವಾರ್ಷಿಕ ಆದಾಯ ರು.1 ಲಕ್ಷಕ್ಕಿಂತ ಕಡಿಮೆ ಇರುವ ಮಕ್ಕಳನ್ನು ಮೊದಲು ಪರಿಗಣಿಸತಕ್ಕದ್ದು.
   ತದ ನಂತರ ಇನ್ನೂ ಸೀಟುಗಳು ಉಳಿಕೆ ಇದ್ದಲ್ಲಿ ರು.1ರಿಂದ 3.50 ಲಕ್ಷದವರೆಗೆ ಆದಾಯ ಇರುವವರನ್ನು ಪರಿಗಣಿಸಲಾಗುವುದು. ನಿಗಧಿ ಪಡಿಸಲಾದ ಅರ್ಜಿ ನಮೂನೆಗಳು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಸಂಬಂಧಪಟ್ಟ ಶಾಲೆಗಳಲ್ಲಿಯೂ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ www.schooleducation.kar.nic.in ನಲ್ಲಿ ಲಭ್ಯವಿರುತ್ತದೆ. ಅರ್ಜಿ ನಮೂನೆಗೆ ಯಾವುದೇ ಶುಲ್ಕವಿರುವುದಿಲ್ಲ. ವೆಬ್‌ಸೈಟ್‌ನಿಂದ ಉಚಿತವಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
 ಜ.6. 2014 ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರತೀ ಶಾಲೆಯಲ್ಲಿ ಲಭ್ಯವಿರುವ ಶೇ.25 ಸೀಟುಗಳನ್ನು ಪ್ರಕಟಿಸುವುದು.
  ಶಾಲಾ ದಾಖಲಾತಿ ಕೋರಿ ಪೋಷಕರು ಜ.7, 2014ರಿಂದ ಫೆ.8, 2014 ಅರ್ಜಿಗಳನ್ನು ಸಲ್ಲಿಸುವುದು, ಕ್ಷೇತ್ರ ಶಿಕ್ಷಣಾಧಿಕಾರಿಯವರು ದಾಖಲಾತಿ ಅನುಮೋದಿಸಿ ಪಟ್ಟಿಯನ್ನು ಸಂಬಂಧಪಟ್ಟ ಶಾಲೆಗಳಿಗೆ ಫೆ.28, 2014 ರೊಳಗೆ ಕಳುಹಿಸುವುದು ಮತ್ತು ಮಾ.3, 2014 ರಿಂದ ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಆರ್.ಬಸವರಾಜ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.