'ಶಿಕ್ಷಣಕ್ಕೆಒತ್ತು ನೀಡಿದಾಗ ಪ್ರಗತಿ'
ಅರಸೀಕೆರೆ: ಯಾವುದೇ ದೇಶ ಅಭಿವೃದ್ಧಿ ಪಥದಲ್ಲಿ ಮುನ್ನಡೆಯಬೇಕಾದರೆ ಅಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನ ನೀಡುವ ಅಗತ್ಯವಿದ್ದು, ಆ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಉತ್ತಮ ಗುಣಮಟ್ಟದ ಶಿಕ್ಷಣ ಎಲ್ಲಾ ಜನರಿಗೂ ಲಭ್ಯವಾಗುವಂತೆ ಕ್ರಮ ಕೈಗೊಂಡಿದೆ. ಎಂದು ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಸರಸ್ವತಿ ವಿ. ಕೋಸಂದರ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ತಾಲೂಕು ಕಾನೂನು ಸೇವಾಸಮಿತಿ, ವಕೀಲರ ಸಂಘ ಮತ್ತು ಶಿಕ್ಷಣ ಇಲಾಖೆ ಹಾಗೂ ಕನ್ನಿಕಾ ಆಂಗ್ಲ ಶಾಲೆ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕಾನೂನು ಅರಿವು ಶಿಬಿರದ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಶಿಕ್ಷಣ ವ್ಯವಸ್ಥೆಯು ಉತ್ತಮ ರೀತಿಯಲ್ಲಿ ಸಾಗುತ್ತಿರುವ ಕಾರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶದ ವಿದ್ಯಾರ್ಥಿಗಳು ಅನೇಕ ವಿಷಯಗಳಲ್ಲಿ ಇತರ ದೇಶದ ವಿದ್ಯಾರ್ಥಿಗಳಿಗೆ ತೀವ್ರ ಪೈಪೋಟಿ ನೀಡುವ ಮೂಲಕ ವಿಶ್ವದ ಗಮನ ಸೆಳೆಯುತ್ತಿದ್ದಾರೆ ಎಂದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ದೇವಾನಂದ ಮಾತನಾಡಿ, ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಪ್ರಧಾನ ಸ್ಥಾನವನ್ನು ನೀಡಲಾಗಿದೆ. ಆದ್ದರಿಂದ ಶಿಕ್ಷಕರ ಜವಾಬ್ದಾರಿ ಹೆಚ್ಚಿದ್ದು, ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಪಠ್ಯಕ್ಕೆ ಸಂಬಂಧಿಸಿದ ವಿಷಯಗಳ ಜತೆ ಜತೆಗೆ ಸಾಮಾಜಿಕ ಕರ್ತವ್ಯಗಳ ಬಗ್ಗೆ ತಿಳಿವಳಿಕೆ ನೀಡುವ ಮೂಲಕ ಉತ್ತಮ ಪ್ರಜೆಗಳನ್ನು ದೇಶಕ್ಕೆ ಕೊಡುಗೆಯಾಗಿ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕವರ್ಗ ಉತ್ತಮವಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು.
ಅಪರ ಸಿವಿಲ್ ನ್ಯಾಯಾಧೀಶ ಪ್ರಕಾಶ್ ಚನ್ನಪ್ಪ ಕುರುಬೆಟ್ ಮಾತನಾಡಿ, ಮಕ್ಕಳ ಹಕ್ಕು ಹಾಗೂ ಅವರ ರಕ್ಷಣೆ ಕುರಿತು ಶಿಕ್ಷಕರು ಸಮಾಜ ತಿಳಿವಳಿಕೆ ನೀಡುವ ಜೊತೆಗೆ ಶಿಕ್ಷಕರು ಅವುಗಳನ್ನು ಪಾಲಿಸಿದಾಗ ಮಾತ್ರ ನೆಹರೂ ಅವರ ಆಶಯ ಸಾಕಾರಗೊಳ್ಳುತ್ತದೆ ಮತ್ತು ಮಕ್ಕಳ ದಿನಾಚರಣೆಗೆ ಒಂದು ಅರ್ಥ ಕಲ್ಪಿಸಿದಂದಾಗುತ್ತದೆ ಎಂದು ತಿಳಿಸಿದರು.
ವಕೀಲ ಆರ್.ವಿಜಯಕುಮಾರ್ ಮಕ್ಕಳ ಹಕ್ಕುಗಳು ಮತ್ತು ಕಡ್ಡಾಯ ಶಿಕ್ಷಣ ಬಗ್ಗೆ ಉಪನ್ಯಾಸ ನೀಡಿದರು. ಕನ್ನಿಕಾ ಆಂಗ್ಲ ಶಾಲೆಯ ಆಡಳಿತ ಸಮಿತಿ ಅಧ್ಯಕ್ಷ ದುರ್ಗಪ್ಪಶ್ರೇಷ್ಠಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ನಟರಾಜ್, ವಕೀಲರ ಸಂಘದ ಅಧ್ಯಕ್ಷ ಎಂ.ಆರ್.ಸರ್ವೇಶ್, ಕಾರ್ಯದರ್ಶಿ ಓ.ಎ.ಶಿವಕುಮಾರ್, ಸರ್ಕಾರಿ ಸಹಾಯಕ ಅಭಿಯೋಜಕರಾದ ಮಮತ, ಡಾ.ಸಿ.ಎಸ್.ಲತಾ ರಾಜೇಶ್, ಕನ್ನಿಕಾ ಆಂಗ್ಲಶಾಲೆ ಮುಖ್ಯಶಿಕ್ಷಕಿ ಸಿ.ಪಿ.ಜಯಂತಿ ಮತ್ತಿತರರು ಇದ್ದರು.
ವಿಹಿಂಪದಿಂದ ಕನಕ ಜಯಂತಿ
ನಗರದ ಹೇಮಾವತಿ ಪ್ರತಿಮೆ ಬಳಿ ವಿಶ್ವಹಿಂದೂ ಪರಿಷತ್, ಬಜರಂಗದಳ ವತಿಯಿಂದ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ನೆರೆದವರಿಗೆ ಸಿಹಿ ಹಂಚಲಾಯಿತು. ವಿಶ್ವಹಿಂದೂ ಪರಿಷತ್, ಬಜರಂಗದಳ ಅಧ್ಯಕ್ಷ ಶ್ರೀನಿವಾಸ್ಗೌಡ, ಕಟ್ಟಾಯ ಶಿವಕುಮಾರ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

