ಅಧ್ಯಕ್ಷರಾಗಿ ಮೂರ್ತಿ ಅವಿರೋಧ ಆಯ್ಕೆ
ಜಾವಗಲ್: ಹೋಬಳಿ ಬಂದೂರು ಗ್ರಾಪಂ ನೂತನ ಅಧ್ಯಕ್ಷರಾಗಿ ಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಿಂದಿನ ಅಧ್ಯಕ್ಷ ಕರಿಯಯ್ಯನವರ ರಾಜೀನಾಮೆಯಿಂದಾಗಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆದು ಮೂರ್ತಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಹಾಗೂ ತಾಪಂ ಕಾರ್ಯನಿರ್ವಾಹಣಾಧಿಕಾರಿ ಟಿ.ಎನ್.ಮೂರ್ತಿ ಘೋಷಿಸಿದರು. ಗ್ರಾಪಂ ಉಪಾಧ್ಯಕ್ಷೆ ತಿಮ್ಮಮ್ಮ, ಸದಸ್ಯೆ ವನಜಾಕ್ಷಮ್ಮ, ಶೋಭ, ಪಾರ್ವತಮ್ಮ, ಕರಿಯಯ್ಯ, ಮಾಜಿ ಉಪಾಧ್ಯಕ್ಷ ಡಿ.ಜಿ.ಶ್ರೀನಿವಾಸ್, ರಾಮೇಗೌಡ, ಎಲ್ಲಾ ಸದಸ್ಯರು, ಕಾರ್ಯದರ್ಶಿ ನಂಜುಡಪ್ಪ, ಕರ ವಸೂಲಿಗಾರ ರಂಗಪ್ಪ ಇದ್ದರು. ನೂತನ ಅಧ್ಯಕ್ಷ ಮೂರ್ತಿ ಮಾತನಾಡಿ ಗ್ರಾಪಂ ವ್ಯಾಪ್ತಿಯ ಮಾದನಹಳ್ಳಿ, ಸೇರಿದಂತೆ ಎಲ್ಲಾ ಗ್ರಾಮಗಳ ಕುಡಿಯುವ ನೀರಿನ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲು ಆದ್ಯತೆ ನೀಡುವುದಾಗಿ ತಿಳಿಸಿ, ಎಲ್ಲಾ ಸದಸ್ಯರ ಸಹಕಾರ ಕೋರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

