ಹಾಸನ

ಎಂಸಿಎಫ್ ಸುತ್ತಮುತ್ತ ಚಿರತೆ ಹಾವಳಿ: ಭೀತಿಯಲ್ಲಿ ಜನತೆ

Published On :

ಹಾಸನ: ತಾಲೂಕು ಸಾಲಗಾಮೆ ಹೋಬಳಿ ಎಂಸಿಎಫ್ ಸುತ್ತಮುತ್ತಲ ಹಳ್ಳಿಗಳಲ್ಲಿ ಚಿರತೆಗಳ ಹಾವಳಿ ಹೆಚ್ಚಿದೆ.  ಈ ಪ್ರದೇಶದಲ್ಲಿ ಮೂರು ಚಿರತೆಗಳಿದ್ದವು. ಇತ್ತೀಚೆಗೆ ಎಂಸಿಎಫ್ ಸುತ್ತಲಿನ ತಡೆಗೋಡೆಗೆ ಹೊಂದಿಕೊಂಡಂತಿರುವ ಪೊದೆಯಲ್ಲಿ ಅಡಗಿದ್ದ ಚಿರತೆಯನ್ನು ಗೋವಿಂದಪುರ ಗ್ರಾಮಸ್ಥರ ಸಹಾಯದಿಂದ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಇನ್ನೂ ಎರಡು ಚಿರತೆಗಳು ಈ ಭಾಗದಲ್ಲಿ ಓಡಾಡಿಕೊಂಡಿವೆ. ಗೋವಿಂದಪುರ ಸಮೀಪದಲ್ಲಿ ಎತ್ತರಕ್ಕೆ ಬೆಳೆದು ನಿಂತಿರುವ ಜೋಳದ ಹೊಲಗಳಲ್ಲಿ ಎರಡು ಚಿರತೆಗಳು ಬುಧವಾರ ಕಾಣಿಸಿಕೊಂಡಿವೆ. ರೈತರು ಹೊಲ, ಗದ್ದೆಗಳಿಗೆ ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಈ ಪ್ರದೇಶದಲ್ಲಿ ಬಹುತೇಕ ರೈತರು ತಮ್ಮ ಹೊಲಗಳಲ್ಲಿಯೇ ಮನೆಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿರುವುದರಿಂದ ರಾತ್ರಿ ವೇಳೆ ಹೊರಬರಲು ಭಯಪಡುವಂತಾಗಿದೆ. ಯಾವುದೇ ಪ್ರಾಣ ಹಾನಿಯಾಗುವ ಮುನ್ನ ಶಾಸಕ ಪ್ರಕಾಶ್ , ಅಧಿಕಾರಿಗಳು ಇತ್ತ ಗಮನ ಹರಿಸಿ ತಕ್ಷಣ ಈ ಎರಡು ಚಿರತೆಗಳನ್ನು ಸೆರೆ ಹಿಡಿಯಲು ಕ್ರಮ ಕೈಗೊಳ್ಳಬೇಕೆಂದು ಗೋವಿಂದಪುರ, ಆಲದಹಳ್ಳಿ, ತವರದೇವರಕೊಪ್ಪಲು ಮತ್ತು ಕಂಚಮಾರನಹಳ್ಳಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.