ನ್ಯಾಯಬೆಲೆ ಅಂಗಡಿಗಳಲ್ಲೇ ಆಹಾರ ಪದಾರ್ಥ ಖರೀದಿಸಿ
ಕ.ಪ್ರ.ವಾರ್ತೆ ಅರಕಲಗೂಡು ನ.23
ಯಾರೊಬ್ಬರೂ ಹಸಿವಿನಿಂದ ಬಳಲಬಾರದೆಂದು ಸರ್ಕಾರ ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು, ಅರ್ಹ ಫಲಾನುಭವಿಗಳು ಸಂಬಂಧಿಸಿದ ಸರ್ಕಾರಿ ನ್ಯಾಯಬೆಲೆ ಅಂಗಡಿಗಳ ಮೂಲಕ ನಿಗದಿಪಡಿಸಿದ ದರದಲ್ಲಿ ಆಹಾರಧಾನ್ಯ ಪಡೆದುಕೊಳ್ಳಬೇಕು ಎಂದು ತಾಲೂಕಿನ ಕತ್ತೀಮಲ್ಲೇನಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಧಾರಾಣಿ ಹೇಳಿದರು.
ಕೇಂದ್ರ ಕ್ಷೇತ್ರ ಪ್ರಚಾರ ನಿರ್ದೇಶನಾಲಯ, ಆಹಾರ ಇಲಾಖೆ, ವಾರ್ತಾ ಇಲಾಖೆ, ಅಮೂಲ್ಯ ಎಫ್ಎಲ್ಸಿ, ಶಿಶು ಅಭಿವೃದ್ಧಿ ಯೋಜನೆ ಅರಕಲಗೂಡು, ಕತ್ತಿಮಲ್ಲೇನಹಳ್ಳಿಯ ಗ್ರಾಮ ಪಂಚಾಯ್ತಿ ಆಶ್ರಯದಲ್ಲಿ ತಾಲೂಕಿನ ಮಳಲಿಕೆರೆ ಅಂಗನವಾಡಿ ಕೇಂದ್ರದಲ್ಲಿ ಏರ್ಪಡಿಸಿದ್ದ ಆಹಾರ ಭದ್ರತಾ ಕಾಯ್ದೆ ಕುರಿತ ವಿಶೇಷ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ಆಹಾರ ಧಾನ್ಯಗಳನ್ನು ಖರೀದಿಸಲು ಆರ್ಥಿಕವಾಗಿ ಹಿಂದುಳಿದವರಿಗೆ ಸರ್ಕಾರ ಈ ಕಾಯ್ದೆಯನ್ನು ಜಾರಿಗೆ ತಂದಿದ್ದು, ಇದರ ಪ್ರಯೋಜನವನ್ನು ಅರ್ಹರು ಪಡೆದುಕೊಳ್ಳಲು ಮುಂದಾಗಬೇಕು ಎಂದರು.
ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲೇಗೌಡ ಮಾತನಾಡಿ, ಇಲಾಖೆವತಿಯಿಂದಲೂ ಅರ್ಹ ಫಲಾನುಭವಿಗಳಿಗೆ ಪೌಷ್ಠಿಕಾಂಶವುಳ್ಳ ಆಹಾರಧಾನ್ಯಗಳನ್ನು ವಿತರಿಸುತ್ತಿದ್ದು, ಇದರ ಪ್ರಯೋಜನವನ್ನು ಅರ್ಹರೂ ಪಡೆದುಕೊಳ್ಳಬೇಕೆಂದು ತಿಳಿಸಿ, ಇಲಾಖೆಯಲ್ಲಿ ಹತ್ತು ಹಲವು ಯೋಜನೆಗಳು ಮಹಿಳೆಯರಿಗಾಗಿಯೇ ಇರುವುದನ್ನು ವಿವರಿಸಿದರು.
ಗ್ರಾಮ ಪಂಚಾಯ್ತಿ ಸದಸ್ಯ ನಂಜುಂಡ ಅಧ್ಯಕ್ಷತೆ ವಹಿಸಿದ್ದರು. ಸಲಹೆಗಾರರಾದ ಬಸವರಾಜು, ಗ್ರಾಮದ ದೇವಣ್ಣ, ಶಿಶು ಅಭಿವೃದ್ಧಿ ಮೇಲ್ವಿಚಾರಕಿ ಜರೀನಾ ಇದ್ದರು. ಕ್ಷೇತ್ರ ಪ್ರಚಾರ ಸಹಾಯಕ ಪ್ರಕಾಶ್ ಪ್ರಾಸ್ತಾವಿಕ ಭಾಷಣ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಕಮಲ ಸ್ವಾಗತಿಸಿದರು. ವಿಜಯ ನಿರೂಪಿಸಿದರು. ಸರೋಜ ವಂದಿಸಿದರು. ಇದೇ ಸಂದರ್ಭದಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

