ಎಪಿಎಂಸಿಗೆ ಕೃಷಿ ಉತ್ಪನ್ನ ಮಾರಿದರೆ ಸೂಕ್ತ ಬೆಲೆ
ಕ.ಪ್ರ.ವಾರ್ತೆ ಅರಸೀಕೆರೆ ನ.24
ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ನಿಯಂತ್ರಿತ ಮಾರುಕಟ್ಟೆಗೆ ತಂದು ಮಾರಾಟ ಮಾಡುವುದರಿಂದ ತೂಕ ಮತ್ತು ಅಳತೆಯಲ್ಲಿ ವಂಚನೆಯಿಲ್ಲದೆ ಬೆಂಬಲ ಬೆಲೆ ಪಡೆಯಲು ಸಾಧ್ಯವಾಗುತ್ತದೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಅಜ್ಜಪ್ಪ ಹೇಳಿದ್ದಾರೆ.
ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯು ಮಾರುಕಟ್ಟೆ ಪ್ರಾಂಗಣದಲ್ಲಿ ಏರ್ಪಡಿಸಿದ್ದ ಮಾರುಕಟ್ಟೆ ಸಪ್ತಾಹ, ರೈತ-ಗ್ರಾಹಕ ಜಾಗೃತಿ ಅಭಿಯಾನದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ತಾಲೂಕಿನ ಅನೇಕ ಭಾಗದಲ್ಲಿ ರೈತರು ಮಳೆಯಿಲ್ಲದೆ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ರೈತರು ಬೆಳೆದ ಬೆಳೆಗಳಿಗೆ ಮುಕ್ತ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ದೊರೆಯದ ಕಾರಣ ಅನೇಕ ರೈತರು ಕೃಷಿ ಚಟುವಟಿಕೆಯಿಂದ ದೂರ ಉಳಿಯುತ್ತಿದ್ದಾರೆ ಎಂದು ಅತಂಕ ವ್ಯಕ್ತಪಡಿಸಿದರು. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಉತ್ತಮವಾದ ವರ್ಗೀಕೃತ ಕೃಷಿ ಪದಾರ್ಥಗಳಿಗೆ ಸ್ಪರ್ಧಾತ್ಮಕ ಬೆಲೆ ದೊರೆಯುತ್ತಿದ್ದು, ವಿದ್ಯುನ್ಮಾನ ತೂಕದ ಯಂತ್ರಗಳನ್ನು ಪದಾರ್ಥಗಳನ್ನು ತೂಕ ಮಾಡಲು ಬಳಸುವ ಕಾರಣ ವ್ಯಾಪಾರಸ್ಥರು ವಂಚನೆ ಮಾಡಲು ಸಾಧ್ಯವಿಲ್ಲ. ಮಾರುಕಟ್ಟೆಯಲ್ಲಿ ಆಕಸ್ಮಿಕವಾಗಿ ಬೆಲೆಯಲ್ಲಿ ಕುಸಿತ ಕಂಡು ಬಂದಲ್ಲಿ ಅಡಮಾನ ಸಾಲ ಸೌಲಭ್ಯ ಮತ್ತು ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಉಂಟಾಗುವ ಅಪಘಾತಗಳಿಗೆ ರೈತ ಸಂಜೀವಿನಿ ವಿಮಾ ಯೋಜನೆಯ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಇವುಗಳ ಸದುಪಯೋಗವನ್ನು ಪಡೆಯಲು ಸಲಹೆ ನೀಡಿದರು.
ಇತ್ತೀಚೆಗೆ ಮಾರುಕಟ್ಟೆಯಲ್ಲಿ ಕೊಬ್ಬರಿಗೆ ಬೆಲೆ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಹೋರಾಟ ನಡೆಸಿ ಫಲವಾಗಿ ನ್ಯಾಪೆಢ್ ಕೇಂದ್ರ ಮೂರು ಖರೀದಿ ಘಟಕಗಳನ್ನು ಆರಂಭಿಸಿ ತಾಲೂಕಿನ 5825 ರೈತರಿಂದ ಸುಮಾರು 53,900 ಕ್ವಿಂಟಲ್ ಕೊಬ್ಬರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ 29.64 ಕೋಟಿ ಹಾಗೂ ರಾಜ್ಯ ಸರ್ಕಾರದ ಸಹಾಯಧನ 5.39 ಕೋಟಿಗಳನ್ನು ರೈತರಿಗೆ ಚೆಕ್ ಮೂಲಕ ವಿತರಣಾ ಕಾರ್ಯಗಳನ್ನು ತ್ವರಿತವಾಗಿ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಸಮಿತಿ ಉಪಾಧ್ಯಕ್ಷ ಸನಾವುಲ್ಲಾ, ಸದಸ್ಯರಾದ ಸಿದ್ದಲಿಂಗಪ್ಪ, ವೆಂಕಟೇಶ್, ಜಯರಾಂ, ಕಾರ್ಯದರ್ಶಿ ಸುಧೀಂದ್ರ, ವರ್ತಕರು, ದಲ್ಲಾಳಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

