ಹಾಸನ

ರಾಸಾಯನಿಕ ಬಳಕೆ ಬೇಡ: ಕೆಂಪೇಗೌಡ

Published On :

ಕ.ಪ್ರ.ವಾರ್ತೆ ಹಾಸನ ನ. 24
ಕಂದಲಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸುರಕ್ಷಿತ ಕೀಟನಾಶಕ ಬಳಕೆ ಮತ್ತು ಸಮಗ್ರ ಪೀಡೆ ನಿರ್ವಹಣೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಜಿಪಂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎ. ನಂಜುಂಡಸ್ವಾಮಿ ಮಾತನಾಡಿ, ವಿಜ್ಞಾನಿಗಳು ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ನೀಡುವ ಮಾರ್ಗದರ್ಶನ ಮತ್ತು ಸಹಕಾರಗಳನ್ನು ರೈತರು ಪಡೆದು ತಮ್ಮ ಕೃಷಿಯಲ್ಲಿ ಅಳವಡಿಸಿಕೊಳ್ಳಲು ಸೂಚಿಸಿದರು. ಹಾಗೂ ಕೃಷಿ ಇಲಾಖೆಯ ಪೀಡೆನಾಶಕಗಳ ಸಮರ್ಪಕ ಮತ್ತು ಸುರಕ್ಷಿತ ಬಳಕೆ ಕುರಿತ ಭಿತ್ತಿಪತ್ರ ಬಿಡುಗಡೆ ಮಾಡಿದರು. ತಾಪಂ ಅಧ್ಯಕ್ಷೆ ರತ್ನಾ ಹನುಮೇಗೌಡ ಅಧ್ಯಕ್ಷತೆ ವಹಿಸಿದ್ದರು.  
ಉಪ ಕೃಷಿ ನಿರ್ದೇಶಕ ಎಚ್.ಕೆಂಪೇಗೌಡ ಮಾತನಾಡಿ, ಆಧುನಿಕ ಕೃಷಿಯಲ್ಲಿ ರಾಸಾಯನಿಕಗಳ ಯಥೇಚ್ಛ ಬಳಕೆಯಿಂದ ಭೂಮಿಯಲ್ಲಿ ಉತ್ಪಾದನೆಯ ಚೈತನ್ಯ ಕಡಿಮೆಯಾಗುತ್ತಿದೆ. ಸಾವಯವ ಗೊಬ್ಬರಗಳನ್ನು ತೋಟಗಾರಿಕಾ ಬೆಳೆಗಳಿಗೆ ಬಳಸುತ್ತಿದ್ದು, ಆಹಾರ ಬೆಳೆಗಳಲ್ಲಿ ಬಳಸುತ್ತಿಲ್ಲ. ರೈತರು ಆಹಾರ ಬೆಳೆಗಳ ಉತ್ಪಾದನೆಯಲ್ಲಿ ಸಾವಯವ ಗೊಬ್ಬರಗಳನ್ನು ಬಳಕೆ ಮಾಡುವಂತೆ ತಿಳಿಸಿದರು.
ಕೃಷಿ ಕಾಲೇಜಿನ ಪ್ರಭಾರ ಡೀನ್ ಹಾಗೂ ಪ್ರಾಧ್ಯಾಪಕ ಡಾ. ತ್ಯಾಗರಾಜ್ ಮಾತನಾಡಿ, ರೈತರು ಕೀಟನಾಶಕ ಬಳಕೆ ಮಾಡುವ ಮುನ್ನ ಕೃಷಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕ ಮಾಡಿ ಸ್ಪಷ್ಟ ಮಾಹಿತಿಯೊಂದಿಗೆ ನಿಗದಿತ ಪ್ರಮಾಣದಲ್ಲಿ, ನಿಗದಿತ ಸಮಯದಲ್ಲಿ ಬಳಕೆ ಮಾಡಬೇಕೆಂದು ತಿಳಿಸಿದರು.
ಕೃಷಿ ಕಾಲೇಜಿನ ರೋಗಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ನಾಗರಾಜ್ ಮಾತನಾಡಿ, ಹಾಸನ ತಾಲೂಕಿನ ಮುಖ್ಯ ಬೆಳೆಗಳಾದ ಮುಸುಕಿನಜೋಳ, ಆಲೂಗಡ್ಡೆ, ತೆಂಗು, ಶುಂಠಿ ಬೆಳೆಗಳಲ್ಲಿ ಬರುವ ರೋಗಗಳ ನಿರ್ವಹಣೆ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು.
ಇಂಡೋಫಿಲ್ ಕಂಪನಿಯ ಮುಖೇಶ್ ಅವರು ಸುರಕ್ಷಿತ ಕೀಟನಾಶಕಗಳ ಬಗ್ಗೆ ಮಾಹಿತಿ ನೀಡಿ ಸಿಂಪರಣೆ ಮಾಡುವ ಕ್ರಮಗಳನ್ನು ಪ್ರಾತ್ಯಕ್ಷಿತೆ ಮೂಲಕ ತೋರಿಸಿಕೊಟ್ಟರು.
ತಾಪಂ ಉಪಾಧ್ಯಕ್ಷ ದೇವೇಗೌಡ ಮತ್ತು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು, ಕೃಷಿ ಇಲಾಖೆಯ ಅಧಿಕಾರಿಗಳು, ಪ್ರಗತಿಪರ ರೈತ ರಾಮೇಗೌಡ, ಹನುಮೇಗೌಡ ಇದ್ದರು. ಸಹಾಯಕ ಕೃಷಿ ನಿರ್ದೇಶಕಿ ಎ.ಎಸ್. ಕೋಕಿಲ ನಿರೂಪಿಸಿ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.