ಇಂದಿನಿಂದ ವಿದ್ಯುತ್ ಅದಾಲತ್
ಹಾಸನ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಹಾಸನ ವಿಭಾಗದ ವ್ಯಾಪ್ತಿಯ ಗ್ರಾಹಕರ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಜನಸಂಪರ್ಕ ಸಭೆಯನ್ನು ನ.26ರಿಂದ 29ರವರೆಗೆ ಆಯಾಯ ತಾಲೂಕು ವಿದ್ಯುತ್ ಇಲಾಖೆ ಕಚೇರಿಗಳಲ್ಲಿ ಏರ್ಪಡಿಸಿದ್ದು, ಗ್ರಾಹಕರು ವಿದ್ಯುಚ್ಛಕ್ತಿಗೆ ಸಂಬಂಧಪಟ್ಟ ಕುಂದುಕೊರತೆಗಳನ್ನು ಅಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೂ ನಡೆಯುವ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿ ಬಗೆಹರಿಸಿಕೊಳ್ಳಬೇಕೆಂದು ಚೆಸ್ಕಾಂನ ಕಾರ್ಯಪಾಲಕ ಎಂಜಿನಿಯರ್ ಕೋರಿದ್ದಾರೆ. ನ.26ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕಚೇರಿ, ಕಾರ್ಯ ಮತ್ತು ಪಾಲನಾ ನಗರ ಉಪ ವಿಭಾಗ, ಸಂತೆಪೇಟೆ, ಹಾಸನ ಇಲ್ಲಿ ಹಾಸನ ತಾಲೂಕಿನ ಗ್ರಾಹಕರು ಜನಸಂಪರ್ಕ ಸಭೆಯಲ್ಲಿ ಭಾಗವಹಿಸಬಹುದಾಗಿದೆ. ನ.27ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ್ಕಚೇರಿ, ಕಾರ್ಯ ಮತ್ತು ಪಾಲನಾ ನಗರ ಉಪ ವಿಭಾಗ, ಆಲೂರು ಇಲ್ಲಿ ಆಲೂರು ತಾಲೂಕಿನ ಗ್ರಾಹಕರು ಜನಸಂಪರ್ಕ ಸಭೆಯಲ್ಲಿ ಭಾಗವಹಿಸಬಹುದಾಗಿದೆ. ನ.28ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕಚೇರಿ, ಕಾರ್ಯ ಮತ್ತು ಪಾಲನಾ ನಗರ ಉಪ ವಿಭಾಗ, ಬೇಲೂರು ಇಲ್ಲಿ ಬೇಲೂರು ತಾಲೂಕಿನ ಗ್ರಾಹಕರು ಜನಸಂಪರ್ಕ ಸಭೆಯಲ್ಲಿ ಭಾಗವಹಿಸಬಹುದಾಗಿದೆ. ನ.29ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕಚೇರಿ, ಕಾರ್ಯ ಮತ್ತು ಪಾಲನಾ ನಗರ ಉಪ ವಿಭಾಗ, ಸಕಲೇಶಪುರ ಇಲ್ಲಿ ತಾಲೂಕಿನ ಗ್ರಾಹಕರು ಜನಸಂಪರ್ಕ ಸಭೆಯಲ್ಲಿ ಭಾಗವಹಿಸಬಹುದಾಗಿದೆ.
ಇಂದು ವಿಶ್ವ ಪರಿಸರ ದಿನಾಚರಣೆ
ಹಾಸನ: ನಗರದ ಎನ್ಸಿಸಿ ಕಚೇರಿಯಲ್ಲಿ 15ನೇ ಕರ್ನಾಟಕ ಬೆಟಾಲಿಯನ್ ಎನ್ಸಿಸಿ ವತಿಯಿಂದ ನ.26ರಂದು ವಿಶ್ವ ಪರಿಸರ ದಿನಾಚರಣೆ ಆಚರಿಸಲಾಗುತ್ತಿದ್ದು, 200 ಎನ್ಸಿಸಿ ಕೆಡೆಟ್ಗಳು ಹಾಗೂ ಎನ್ಸಿಸಿ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಂಬಂಧ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮೆರವಣಿಗೆಯು ಅಂದು ಬೆಳಗ್ಗೆ 9.45 ಕ್ಕೆ ಎನ್ಸಿಸಿ ಕಚೇರಿಯಿಂದ ಹೊರಟು ಆರ್.ಸಿ. ರಸ್ತೆ, ಎನ್.ಆರ್. ವೃತ್ತ, ಹಳೆ ಬಸ್ ನಿಲ್ದಾಣ, ಎ.ವಿ.ಕೆ. ಕಾಲೇಜು ಮೂಲಕ ಬೆಳಗ್ಗೆ 11 ಗಂಟೆಗೆ ಎನ್ಸಿಸಿ ಕಚೇರಿಯ ಹತ್ತಿರ ಮುಕ್ತಾಯವಾಗುತ್ತದೆ ಎಂದು 15ನೇ ಕರ್ನಾಟಕ ಬೆಟಾಲಿಯನ್ ಎನ್ಸಿಸಿ ಆಡಳಿತಾಧಿಕಾರಿ ಲೆಫಿನೆಂಟ್ ಕರ್ನಲ್ ದಾಮೋದರನ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

