ಹಾಸನ

ಬಾಲ್ ಬ್ಯಾಡ್ಮಿಂಟನ್‌ನಲ್ಲಿ ತೃತೀಯ

Published On :

ಜಾವಗಲ್: ಸರ್ಕಾರಿ ಪದವಿಪೂರ್ವ ಕಾಲೇಜಿನ ಬಾಲಕಿಯರು ಬಾಗಲಕೋಟೆಯಲ್ಲಿ ನಡೆದ ಪಿ.ಯು. ಕಾಲೇಜುಗಳ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಟನ್ ಪಂದ್ಯದಲ್ಲಿ ತೃತೀಯ ಸ್ಥಾನ ಪಡೆದು ಕಾಲೇಜಿಗೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ವಿಜೇತ ಬಾಲಕಿಯರಾದ ಪ್ರೇಮ, ಅಮೃತ, ಪವಿತ್ರ, ರಚನಾ, ತನುಶ್ರೀ ಅವರನ್ನು ಪ್ರಾಂಶುಪಾಲ ವಸಂತರಾಜ ಅರಸ್ ಅಭಿನಂದಿಸಿ ಪಾರಿತೋಷಕ ನೀಡಿ ಗೌರವಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಸಂತರಾಜ ಅರಸ್ ಅವರು, ಗ್ರಾಮೀಣ ಭಾಗದ ಈ ವಿದ್ಯಾರ್ಥಿನಿಯರು ಕ್ರೀಡಾ ಶಿಕ್ಷಕರಿಲ್ಲದಿದ್ದರೂ, ಉಪನ್ಯಾಸಕ ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಸತತ ಪ್ರಯತ್ನದಿಂದ ರಾಜ್ಯ ಮಟ್ಟದಲ್ಲಿ ಸ್ಪರ್ಧಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆಂದರು. ಉಪನ್ಯಾಸಕರಾದ ಮಂಜು ನಾಥ್, ಎನ್. ಉದಯ್‌ಕುಮಾರ್, ಬಿ.ಎಂ. ನಾಗರಾಜ್, ಎಚ್.ಕೆ. ಉದಯಕುಮಾರ್ ಮಾತನಾಡಿ, ಕ್ರೀಡೆಯು ಶಿಕ್ಷಣದ ಅವಿಭಾಜ್ಯ ಅಂಗವಾಗಿದ್ದು ವಿದ್ಯಾರ್ಥಿಗಳು ಓದಿನೊಂದಿಗೆ ಕ್ರೀಡೆಗೂ ಗಮನ ನೀಡಬೇಕೆಂದರು. ಉಪನ್ಯಾಸಕರಾದ ಶಿವಲಿಂಗಯ್ಯ, ಸ್ವಪ್ನ, ತಬಸಂ, ಲತಾ, ನಾಗೇಶ್, ಶ್ರೀನಿವಾಸ್ ಇದ್ದರು.

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ
ಹಾಸನ: ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಹೊನ್ನೇನಹಳ್ಳಿಯಲ್ಲಿ ಸೋಮವಾರ ನಡೆದಿದೆ. ನಗರದ ಹೊರವಲಯದ ಚಿಕ್ಕಹೊನ್ನೇನಹಳ್ಳಿಯ ವಾಸಿ ಈರೇಗೌಡ(40) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಈರೇಗೌಡ, ನಿತ್ಯ ಕುಡಿದು ಬಂದು ಮನೆಯಲ್ಲಿ ಜಗಳ ಆಡುತ್ತಿದ್ದ ಎನ್ನಲಾಗಿದೆ. ಈ ಮಧ್ಯೆ ಮೃತನ ಪತ್ನಿ ಚೈತ್ರ, ಕೆಲ ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದಳು. ಇದರಿಂದ ಮನನೊಂದ ಈರೇಗೌಡ ಕಳೆದ ರಾತ್ರಿ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ಮೃತದೇಹದ ಕಾಲುಗಳು ನೆಲಕ್ಕೆ ತಾಗಿದಂತೆ ಇರುವುದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.