ಎಟಿಎಂ ಭದ್ರತೆಗೆ ಬ್ಯಾಂಕ್ ಹೊಣೆ: ಪೊಲೀಸರ ತಾಕೀತು
ಅರಸೀಕೆರೆ: ಹಾಡ ಹಗಲೇ ಬೆಂಗಳೂರಿನ ಎಟಿಎಂ ಕೇಂದ್ರವೊಂದರಲ್ಲಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿರುವ ಪಾತಕಿಯನ್ನು ಬಂಧಿಸಿ ಶಿಕ್ಷೆ ನೀಡಬೇಕೆಂಬ ಒತ್ತಡ ಪೊಲೀಸ್ ಇಲಾಖೆ ಮೇಲಿದ್ದು, ಘಟನೆಯಿಂದ ಎಚ್ಚೆತ್ತಿರುವ ಪಟ್ಟಣ ಠಾಣೆ ಪೊಲೀಸರು ಪಟ್ಟಣದ ವಿವಿಧ ಬ್ಯಾಂಕ್ಗಳ ವ್ಯವಸ್ಥಾಪಕರ ಸಭೆ ನಡೆಸಿ ಸಲಹೆ ನೀಡಿದರು.
ಪಟ್ಟಣದಲ್ಲಿ ಖಾಸಗಿ ಬ್ಯಾಂಕ್ಗಳು ಸೇರಿದಂತೆ 20 ಬ್ಯಾಂಕ್ಗಳು, 17 ಎಟಿಎಂ ಕೇಂದ್ರಗಳು ಸೇವೆಯಲ್ಲಿದ್ದು, ಈ ನಿಟ್ಟಿನಲ್ಲಿ ಬ್ಯಾಂಕ್ಗಳು ಗ್ರಾಹಕರ ಭದ್ರತೆಗೆ ಏನು ಕ್ರಮ ಕೈಗೊಂಡಿವೆ. ಹಾಗು ಕ್ರಮ ಕೈಗೊಳ್ಳಬೇಕೆಂಬುದನ್ನು ಪೊಲೀಸರು ಹಾಗು ಬ್ಯಾಂಕ್ ವ್ಯವಸ್ಥಾಪಕರು ಚರ್ಚಿಸಿದರು. ಪಟ್ಟಣ ಠಾಣೆ ವೃತ್ತ ನಿರೀಕ್ಷಕ ನಂದಕುಮಾರ್ ಮಾತನಾಡಿ, ಬ್ಯಾಂಕ್ ಹಾಗು ಎಟಿಎಂನಲ್ಲಿ ಹಣ ಡ್ರಾ ಮಾಡಲು ಬರುವ ಗ್ರಾಹಕರಿಗೆ ಬ್ಯಾಂಕ್ಗಳು ಸೂಕ್ತ ಭದ್ರತೆ ಒದಗಿಸಬೇಕು. ಎಟಿಎಂ ಕೇಂದ್ರಗಳಲ್ಲಿ ದಿನದ 24 ಗಂಟೆಯೂ ಭದ್ರತಾ ಸಿಬ್ಬಂದಿಯನ್ನು ಕಡ್ಡಾಯವಾಗಿ ನೇಮಿಸಬೇಕು ಎಂದು ತಾಕೀತು ಮಾಡಿದರು.
ಇತ್ತೀಚೆಗೆ ರಾಜ್ಯದ ವಿವಿಧೆಡೆಯಲ್ಲಿ ಬ್ಯಾಂಕ್, ಮನೆ, ಕಚೇರಿಗಳಲ್ಲಿ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದರು. ಉಪ ನಿರೀಕ್ಷಕ ಐ.ಎನ್.ಗೌಡ ಸೇರಿದಂತೆ ಪೊಲೀಸ್ ಸಿಬ್ಬಂದಿ ಹಾಗೂ ಬ್ಯಾಂಕ್ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

