ಹಾಸನ

ಕೊಲೆ ಆರೋಪ: ಐವರ ಬಂಧನ

Published On :

ಸಕಲೇಶಪುರ: 6 ದಿನಗಳ ಹಿಂದೆ ನಡೆದ ಕೊಲೆಯೊಂದರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಸಕಲೇಶಪುರ ಪೋಲಿಸರು ಯಶಸ್ವಿಯಾಗಿದ್ದಾರೆ.
ತಾಲೂಕಿನ ಹಲಸುಲಿಗೆ ಗ್ರಾಮದ ಪುಟ್ಟಸ್ವಾಮಿಗೌಡರ ಪುತ್ರ ಗಿರೀಶ್(38) ಎಂಬಾತನನ್ನು ಕಳೆದವಾರ ದುಷ್ಕರ್ಮಿಗಳು ಮನೆ ಸಮೀಪದಲ್ಲಿಯೇ ಕೊಚ್ಚಿ ಕೊಲೆ ಮಾಡಿ ಸಮೀಪದ ತೋಟವೊಂದರಲ್ಲಿ ಹೆಣ ಬಿಸಾಕಿ ಪರಾರಿಯಾಗಿದ್ದರು.  ಈ ಸಂಬಂಧ ಪಟ್ಟಣ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.  ಈ ನಿಟ್ಟಿನಲ್ಲಿ ಕೊಲೆ ಆರೋಪದಡಿ ಬಂಧಿತರಾಗಿರುವ ರಘು (30), ಲಿಂಗರಾಜು ಅಲಿಯಾಸ್  ರಾಜು (36), ಚಂದ್ರೇಗೌಡ (45), ಸತೀಶ್ (31), ಅಪ್ಪು ಆಲಿಯಾಸ್ ಗಂಗರಾಜ್ (38) ಎಲ್ಲರೂ ಹಲಸುಲಿಗೆ ಸುತ್ತಮುತ್ತದ ಗ್ರಾಮದವ ರಾಗಿದ್ದು ಜಮೀನಿನ ತಕರಾರಿನ ವೈಷಮ್ಯವೇ ಕೊಲೆಗೆ ಕಾರಣ ಎಂದು ತಿಳಿದು ಬಂದಿದೆ.  ಖಚಿತ ಮಾಹಿತಿ ಮೇರೆಗೆ ಪೋಲಿಸರು ಇಬ್ಬರು ಆರೋಪಿಗಳನ್ನು ತಾಲೂಕಿನ ಬಾಳ್ಳುಪೇಟೆ  ಗ್ರಾಮದಲ್ಲಿ, ಇನ್ನುಳಿದ ಮೂವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯಲ್ಲಿ ಬಂಧಿಸ ಲಾಗಿದೆ ಎಂದು ತಿಳಿಸಿದ್ದಾರೆ. ಆರೋಪಿಗಳನ್ನು ಪಟ್ಟಣದ ಕೌಡಹಳ್ಳಿ ಉಪ ಬಂಧಿಖಾನೆಯಲ್ಲಿ ಇರಿಸಲಾಗಿದೆ.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.