ಬಾಳ್ಲುಪೇಟೆ ಮೂಲ ಸೌಲಭ್ಯಕ್ಕೆ 1.3 ಕೋಟಿ: ಎಚ್.ಕೆ. ಕುಮಾರಸ್ವಾಮಿ
ಸಕಲೇಶಪುರಛ ಬಾಳ್ಳುಪೇಟೆ ಗ್ರಾಪಂ ವ್ಯಾಪ್ತಿಯ ಗ್ರಾಮಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 1.3 ಕೋಟಿ ಖರ್ಚು ಮಾಡಲಾಗಿದೆ ಎಂದು ಸ್ಥಳೀಯ ಶಾಸಕ ಎಚ್.ಕೆ.ಕುಮಾರಸ್ವಾಮಿ ಹೇಳಿದರು.
ಇತ್ತೀಚೆಗೆ ಗ್ರಾಪಂ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಈ ವ್ಯಾಪ್ತಿಯ ಕುಡಿಯುವ ನೀರು ಹಾಗೂ ರಸ್ತೆ ಅಭಿವೃದ್ಧಿಗೆ ಕಳೆದ ನಾಲ್ಕು ವರ್ಷದಲ್ಲಿ 1 ಕೋಟಿಗೂ ಹೆಚ್ಚಿನ ಅನುದಾನ ನೀಡಲಾಗಿದೆ. ಸುವರ್ಣ ಗ್ರಾಮ ಯೋಜನೆಯಡಿ ಬನವಾಸೆ ಗ್ರಾಮದ ರಸ್ತೆಗಳನ್ನು 35 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲಾಗಿದೆ ಎಂದು ತಿಳಿಸಿದರು.
ಹಸುಗುವಳ್ಳಿ ಗ್ರಾಮದ ರಸ್ತೆಗಳ ಅಭಿವೃದ್ಧಿಗೆ 40 ಲಕ್ಷ ವೆಚ್ಚ ಮಾಡಲಾಗಿದ್ದು, ಕುಡಿಯುವ ನೀರಿಗಾಗಿ ಸಹ ಸಾಕಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಶಿವರಾಂ ಪಟೇಲ್ ಮಾತನಾಡಿ, ಗ್ರಾಪಂ ಆಡಳಿತ ಪಾರದರ್ಶಕವಾಗಿದ್ದರೆ ಗ್ರಾಮಗಳ ಅಭಿವೃದ್ಧಿ ಸಾಧ್ಯ. ಕ್ಷುಲಕ ವಿಚಾರಗಳನ್ನು ಬದಿಗೊತ್ತಿ ಗ್ರಾಮಗಳ ಅಭಿವೃದ್ಧಿಗೆ ಸದಸ್ಯರು ಪಕ್ಷಬೇಧ ಮರೆತು ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು.
ಬಾಳ್ಳುಪೇಟೆ ಗ್ರಾಪಂ ಅಧ್ಯಕ್ಷ ಪರಮೇಶ್, ಜೆಡಿಎಸ್ ಮುಖಂಡರಾದ ಶಿವಕುಮಾರ್, ಮಲ್ಲಿಕಾರ್ಜುನ್, ಕಾಂಗ್ರೆಸ್ ಜಿಲ್ಲಾ ವಕ್ತಾರ ಬಿ.ಎ ಜಗನ್ನಾಥ್, ಎಪಿಎಂಸಿ ಸದಸ್ಯ ಕಾಂತರಾಜ್ ಸೇರಿದಂತೆ ಮುಂತಾದವರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

