ಹಾಸನ

ರಾಜ್ಯ ಮಟ್ಟಕ್ಕೆ ಆಯ್ಕೆ

Published On :

ಹಾಸನ: ಇತ್ತೀಚೆಗೆ ನಡೆದ ಹಾಸನ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಹಾಸನದ ಬಾಲಕಿಯರ ವಿಭಜಿತ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಹರ್ಷಿತಾ ಎಸ್.ಎಸ್. ವಿಜ್ಞಾನ ಉಪನ್ಯಾಸ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿ ಪಿ.ರಚನಾ ವಿಜ್ಞಾನ ಉಪನ್ಯಾಸ ಸ್ಪರ್ಧೆ ಆಂಗ್ಲ ಮಾಧ್ಯಮದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜೇತರನ್ನು ಪ್ರಾಂಶುಪಾಲ ಹಾಗೂ ಉಪನ್ಯಾಸಕ ವರ್ಗ ಅಭಿನಂದಿಸಿದೆ.
ವಾಲ್ಮೀಕಿ ಸಂಘಕ್ಕೆ ಆಯ್ಕೆ
ಹೊಳೆನರಸೀಪುರ: ತಾಲೂಕು ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಆಶ್ರಯದಲ್ಲಿ ತಾಲೂಕಿನ ಜಕ್ಕವಳ್ಳಿ ಗ್ರಾಮದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಸಂಘದ ಅಧ್ಯಕ್ಷ ವೆಂಕಟೇಶ್ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಅಧ್ಯಕ್ಷ ಮೋಹನ್ನಾಯಕ್ ಮಾತನಾಡಿ, ತಾಲೂಕಿನ ವಾಲ್ಮೀಕಿ ಜನಾಂಗದ ಏಳಿಗೆಗಾಗಿ ತಾವು ಮತ್ತು ತಮ್ಮೊಂದಿಗೆ ಆಯ್ಕೆ ಗೊಂಡಿರುವ ನೂತನ ಕಾರ್ಯಕಾರಿ ಸಮಿತಿ ಸದಸ್ಯರು  ಶ್ರಮಿಸುವುದಾಗಿ ತಿಳಿಸಿದರು.
ನೂತನ ಕಾರ್ಯಕಾರಿ ಮಂಡಳಿ: ಅಧ್ಯಕ್ಷರಾಗಿ ಜಕ್ಕವಳ್ಳಿ ಗ್ರಾಮದ ಮೋಹನ್ನಾಯಕ್, ಉಪಾದ್ಯಕ್ಷರಾಗಿ ಕೆರೆಮೇಗಳ ಕೊಪ್ಪಲಿನ ಚಂದ್ರನಾಯಕ್, ಗೌರವಾಧ್ಯಕ್ಷರಾಗಿ ದೊಡ್ಡಕುಂಚೆ ಜವರಪ್ಪ, ಕಾರ್ಯದರ್ಶಿಯಾಗಿ ಹಾರಗೌಡನಹಳ್ಳಿ ರಾಮಕೃಷ್ಣನಾಯಕ್, ಕೋಶಾಧ್ಯಕ್ಷರಾಗಿ ಶಿವಣ್ಣ ಅವರನ್ನು ಆಯ್ಕೆ ಮಾಡಲಾಯಿತು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.