ಇಂದಿನಿಂದ ಹೊಯ್ಸಳ ಸಂಭ್ರಮ
ಕನ್ನಡಪ್ರಭ ವಾರ್ತೆ ಹಾಸನ ನ.26
ರೈನ್ಬೋ ಸಂಸ್ಥೆ ವತಿಯಿಂದ ನಗರದಲ್ಲಿ ಬೃಹತ್ ವಸ್ತು ಪ್ರದರ್ಶನ ಹಾಗೂ ಮನರಂಜನೆಯ ಹೊಯ್ಸಳ ಸಂಭ್ರಮವನ್ನು ನ.27ರಿಂದ ಡಿ.31ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆ ಗೌರವಾಧ್ಯಕ್ಷ ಎಚ್.ಬಿ. ಮದನ್ಗೌಡ ತಿಳಿಸಿದ್ದಾರೆ.
ಈ ಸಂಬಂಧ ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲೆ, ಸಂಸ್ಕೃತಿ ಮತ್ತು ಮನರಂಜನೆಯ ಹಬ್ಬ ಹೊಯ್ಸಳ ಸಂಭ್ರಮವಾಗಿದ್ದು, ನಗರದ ಹೈಟೆಕ್ ಬಸ್ನಿಲ್ದಾಣದ ಪಕ್ಕ ನಡೆಯಲಿದೆ. ಜೊತೆಗೆ ಪ್ರತಿನಿತ್ಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಮಕ್ಕಳಿಗೆ ಅನುಕೂಲವಾಗುವಂತೆ ಎಲ್ಲಾ ಬಗೆಯ ಆಟಕಿಯ ಸಾಮಾಗ್ರಿಗಳನ್ನು ಪ್ರದರ್ಶನದಲ್ಲಿ ಇಡಸಲಾಗಿದ್ದು, ಮಕ್ಕಳಲ್ಲಿರುವ ಪ್ರತಿಭೆ ಗುರುತಿಸುವ ಸಲುವಾಗಿ ಟ್ಯಾಲೆಂಟ್ ಶೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇಂದು ಶಾಂತಿ ವಿಚಾರ ಸಂಕಿರಣ
ಹಾಸನ: ಶಾಂತಿ ಪ್ರಕಾಶನದ ರಜತ ಮಹೋತ್ಸವದ ಅಂಗವಾಗಿ ನ. 27 ರಂದು ಸಂಜೆ 6.30ಕ್ಕೆ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗಿದೆ. ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ, ಜವೇನಹಳ್ಳಿ ಮಠದ ಸಂಗಮೇಶ್ವರ ಸ್ವಾಮೀಜಿ, ಜಿಲ್ಲಾ ಎಸ್ಪಿ ರವಿ ಡಿ. ಚನ್ನಣ್ಣನವರ್, ಸಾಹಿತಿಗಳಾದ ಬಿ.ಟಿ.ಲಲಿತಾನಾಯಕ್, ಜ.ಹೊ.ನಾರಾಯಣಸ್ವಾಮಿ ಇತರರು ಭಾಗವಹಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

