ಹಾಸನ

'ಕನ್ನಡ ಬದುಕಿನ ಭಾಗವಾಗಲಿ'

Published On :

ಜಾವಗಲ್: ಕನ್ನಡ ಭಾಷೆಯು ಪ್ರತಿಯೊಬ್ಬ ಕನ್ನಡಿಗನ ಬದುಕಿನ ಭಾಗವಾಗಿರಬೇಕೆಂದು ಜಾವಗಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಕೆ.ಬಾಷಾ ಅಭಿಪ್ರಾಯಪಟ್ಟರು.
ಇಲ್ಲಿನ ಬಿಸಿಸಿ ಗೆಳೆಯರ ಬಳಗ, ಗ್ರಾಮಸ್ಥರ ಸಹಯೋಗದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದದಲ್ಲಿ ಭುವನೇಶ್ವರಿ ತಾಯಿ ಹಾಗೂ ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಕನ್ನಡ ಭಾಷಾಭಿಮಾನ ಬೆಳೆಸಿಕೊಳ್ಳಬೇಕು. ನವೆಂಬರ್ ತಿಂಗಳಿಗೆ ಮಾತ್ರ ಕನ್ನಡ ಚಟುವಟಿಕೆ ಸೀಮಿತಗೊಳಿಸದೆ, ನಿರಂತರವಾಗಿ ಕನ್ನಡ ಕೆಲಸ ನಡೆಯುವಂತಾಗಬೇಕು. ಎಲ್ಲ ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಮನೋಭಾವ ಬೆಳಸಿಕೊಳ್ಳಬೇಕಿದೆ ಎಂದರು.  
ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಎಸ್.ವಸಂತರಾಜಅರಸ್, ಉಪ ಪ್ರಾಂಶುಪಾಲ ಯೋಗೀಶ್, ಜಾವಗಲ್ ಹೋಬಳಿ ಕಸಾಪ ಅಧ್ಯಕ್ಷ ಶಿವಶಂಕರ್, ಶಿವಪ್ರಕಾಶ್, ಅನಿಲ್ಕುಮಾರ್, ಎಸ್ಡಿಎಂಸಿ ಅಧ್ಯಕ್ಷ ರುದ್ರೇಶ್, ಶ್ರೀನಿವಾಸ್ಗೌಡ ಮತ್ತಿತರರು ಉಪಸ್ಥಿತರಿದ್ದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಭುವನೇಶ್ವರಿ ತಾಯಿ ಮೆರವಣಿಗೆಯಲ್ಲಿ ನೂರಾರು ಮಕ್ಕಳು ಕಂಸಾಳೆ, ತಮಟೆವಾದ್ಯ, ಡೊಳ್ಳು ಕುಣಿತ, ವೀರಗಾಸೆ, ನೃತ್ಯದೊಂದಿಗೆ ಹೆಜ್ಜೆ ಹಾಕುತ್ತ ಸಾಗಿದರು. ಮಹಿಳೆಯರನ್ನು  ರಕ್ಷಿಸಿ, ದೌರ್ಜನ್ಯ ತಡೆಗಟ್ಟಿ, ಮಹಿಳೆಯನ್ನು ಕಿತ್ತು ತಿನ್ನುತ್ತಿರುವ ವರದಕ್ಷಿಣೆ, ಮೋಸ, ಅತ್ಯಾಚಾರದ ಭೂತಗಳನ್ನು ಒಳಗೊಂಡ ಸ್ತಬ್ಧ ಚಿತ್ರ ಮನೋಜ್ಞವಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.