ಹಾಸನ

ಕಿರುಕುಳ ಖಂಡಿಸಿ ಲಾರಿ ಚಾಲಕರ ಪ್ರತಿಭಟನೆ

Published On :

ಹಾಸನ: ಪೆಟ್ರೋಲ್ ಟ್ಯಾಂಕರ್ನ ಚಾಲಕ ಮತ್ತು ನಿವಾರ್ಹಕರಿಗೆ ತೊಂದರೆ ನೀಡಿದ ಪರಿಣಾಮ, ಚಾಲಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಈ ಘಟನೆ ಖಂಡಿಸಿ ಚಾಲಕರು ಹಾಗೂ ನಿರ್ವಾಹಕರು ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ಹೊರವಲಯದಲ್ಲಿ ಇರುವ ಎಚ್ಸಿಎಲ್ ಪೆಟ್ರೋಲ್ ಟ್ಯಾಂಕ್ ಎದುರು ಲಾರಿಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದರು.
ಎಚ್ಸಿಎಲ್ ಪೆಟ್ರೋಲ್ ಟ್ಯಾಂಕ್ನಲ್ಲಿ ಲಾರಿಗಳಿಗೆ ಇಂಧನ ತುಂಬಿಸಲು ಹೋದ ಸಂದರ್ಭದಲ್ಲಿ ರಘು ಎಂಬಾತನಿಗೆ ಕಂಪನಿಯವರು ಮಾನಸಿಕವಾಗಿ ಕಿರುಕುಳ ನೀಡಿದ ಪರಿಣಾಮ ಆತ ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದಕ್ಕೆ ಕಂಪನಿಯವರೇ ನೇರ ಹೊಣೆಯಾಗಿದ್ದಾರೆ ಎಂದು ಆರೋಪಿಸಿದರು.
ಲಾರಿ ಲೋಡ್ ಮಾಕೊಂಡು ಹೋಗುವಾಗ ಪ್ರತಿನಿತ್ಯ ಕಂಪನಿಯ ಮಾಲೀಕರು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಮಾನಗೊಳಿಸುತ್ತಿದ್ದರು. ಇದನ್ನು ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುತಿರುವುದಾಗಿ  ಡೆತ್ ನೋಟ್ ಬರೆದಿಟ್ಟು ರಘು ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಈ ಸಂಬಂಧ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.  ಈ ನಿಟ್ಟಿನಲ್ಲಿ ಈ ಕೂಡಲೇ ಅತನಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಲಾರಿ ಲೋಡ್ ಮಾಡಿಕೊಂಡು ಹೊರ ಬರಲು ಅಲ್ಲಿನ ಸಿಬ್ಬಂದಿಗೆ ಲಂಚ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಜೊತೆಗೆ ಭದ್ರತೆ ಇಲ್ಲದೆ ಕೆಲಸ ನಿರ್ವಹಿಸಲಾಗುತ್ತದೆ. ಆದ್ದರಿಂದ ಕೂಡಲೇ ನಮಗೆ ನ್ಯಾಯಾ ದೊರಕಿಸಿಕೊಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
 ಕರವೇ ತಾಲೂಕು ಅಧ್ಯಕ್ಷ ಜಗನ್ನಾಥ್, ಉಪಾಧ್ಯಕ್ಷ ಹರೀಶ್ಗೌಡ, ಟ್ಯಾಂಕರ್ ಚಾಲಕರಾದ ಪ್ರದೀಪ್, ರವಿ, ಉಮೇಶ್, ಪುನೀತ್, ಆನಂದ್, ಶ್ರೀಧರ್ ಸೇರಿದಂತೆ ಮತ್ತಿತರರು ಪ್ರತಿಭಟನೆ ನೇತೃತ್ವವಹಿಸಿದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.