ಡಿ.2 ರಂದು ಶಾಂತಮಲ್ಲೇಶ್ವರ ಜಾತ್ರೆ
ಹಾಸನ: ಡಿ.2 ರಂದು ಆಲೂರು ತಾಲೂಕು ಮಡಬಲು ಸಂಕಲಾಪುರ ಮಠದ ಶಾಂತಮಲ್ಲೇಶ್ವರ ಸ್ವಾಮಿ ಜಾತ್ರಾ ಮಹೋತ್ಸವೆ ನಡೆಯಲಿದೆ. ಅಂದು ಬೆಳಗ್ಗೆ 5 ರಿಂದ ರುದ್ರಾಭಿಷೇಕ, ಬಿಲ್ವಾರ್ಚನೆ, ರಾಜೋಪಚಾರ ಸೇರಿದಂತೆ ವಿಧಿ ವಿಧಾನದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ1 ಗಂಟೆಯಿಂದ ಸಂಜೆ 6ರವರೆಗೆ ದಾಸೋಹ, ರಾತ್ರಿ 7 ರಿಂದ 10ರವರೆಗೆ ಧಾರ್ಮಿಕ ಸಮ್ಮೇಳನ ನಡೆಯುವುದು. ನಂತರ ಸ್ವಾಮಿಗೆ ಮುತ್ತಿನ ಪಲ್ಲಕ್ಕಿಯಲ್ಲಿ ಉತ್ಸವ ನಡೆಸಲಾಗುವುದು. ಇದೇ ದಿನ ಮಠದಲ್ಲಿ ಸೇವೆ ಸಲ್ಲಿಸಿರುವ ಸಂಕಲಾಪುರದ ಸಾಕಮ್ಮ,ನಂಜಮ್ಮ, ಸೋಮಯ್ಯ, ಪುಟ್ಟಮ್ಮ, ಕಲ್ಲಪ್ಪಗೌಡ ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಗ್ರಾಮ ಸಭೆ
ಬೇಲೂರು: ತಾಲೂಕಿನ ಗೆಂಡೇಹಳ್ಳಿಯ ಸಮುದಾಯಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ಇತ್ತೀಚೆಗೆ ಗ್ರಾಮ ಸಮಲೋಚನಾ ಸಭೆ ನಡೆಸಲಾಯಿತು. ಗ್ರಾಮಾಭಿವೃದ್ಧಿ ಯೋಜನೆ ಸಿಬ್ಬಂದಿ ಜಿ.ಬಿ. ಶ್ರೀನಿವಾಸ ಮಾತನಾಡಿ, ಹಳ್ಳಿಯ ಜನಗಳ ಕುಟುಂಬವನ್ನು ಅಭಿವೃದ್ಧಿ ಮಾಡಲು ಬಂದಿರುವ ಯೋಜನೆಯು ಗೆಂಡೆಹಳ್ಳಿ ಗ್ರಾಮ ಪಂಚಾಯಿತಿಯ ಎಲ್ಲಾ ಹಳ್ಳಿಗಳಲ್ಲೂ ಸಂಘಗಳನ್ನು ಮಾಡುವ ಬಗ್ಗೆ ತಿಳಿಸಿದರು. ಹೈನುಗಾರಿಕೆ ಅಧಿಕಾರಿ ಹರೀಶ್ ಮಾತನಾಡಿ, ರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾತನಾಡಿ ಶುದ್ಧ ಗಂಗಾ ಘಟಕ ನೀರಿನ ಬಗ್ಗೆ ಶೌಚಾಲಯ ರಚನೆ ಬಗ್ಗೆ ಸಮುದಾಯ ಅಭಿವೃದ್ಧಿ ಬಗ್ಗೆ ನಿರ್ಗತಿಕರ ಮಾಸಾಶನದ ಬಗ್ಗೆ ಯೋಜನೆಯ ಸಹಾಯಧನದ ಬಗ್ಗೆ ಮಾಹಿತಿ ನೀಡಿದರು. ಮೇಲ್ವಿಚಾರಕಿ ಅನುಸೂಯ ಸ್ವಾಗತಿಸಿದರು. ಬಿ.ಶ್ರೀನಿವಾಸ್, ಹರೀಶ್, ಕೋದಂಡೇಗೌಡ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.
ಧನಸಹಾಯ
ಹಾಸನ: ಜಿಲ್ಲಾ ಒಕ್ಕಲಿಗರ ಸಂಘ ನಿರ್ಮಿಸುತ್ತಿರುವ ವಿದ್ಯಾರ್ಥಿ ನಿಲಯಕ್ಕೆ ನಗರದ ಪ್ರೊ.ಡಿ.ಜಿ. ಕೃಷ್ಣೇಗೌಡ 30,000 ಕೊಡುಗೆ ನೀಡಿರುತ್ತಾರೆ ಎಂದು ಸಂಘದ ಅಧ್ಯಕ್ಷ ಜಿ.ಎಲ್. ಮುದ್ದೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನಕ ಜಯಂತಿ
ಬೇಲೂರು: ವಿದ್ಯಾರ್ಥಿಗಳು ದಾರ್ಶನಿಕರ ಜೀವನ ತತ್ವಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ತಾಲೂಕು ಕಸಾಪ ಅಧ್ಯಕ್ಷ ಬಿ.ಎನ್. ಆನಂದ್ ಹೇಳಿದರು. ಪಟ್ಟಣದ ಮೂಡಿಗೆರೆ ರಸ್ತೆಯಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಗಿಡ ನೆಡುವ ಮೂಲಕ ವಿಶಿಷ್ಟವಾಗಿ ಕನಕದಾಸರ ಜಂಯತಿ ಆಚರಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಕನಕದಾಸರ ಕೀರ್ತನೆಗಳು ಸರಳ ಭಾಷೆಯಲ್ಲಿದ್ದು ಶ್ರೀಸಾಮಾನ್ಯರು ಅರ್ಥ ಮಾಡಿಕೊಳ್ಳುವಂತಿವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

