ಕನ್ನಡ ರಸಪ್ರಶ್ನೆ ಕಾರ್ಯಕ್ರಮ
ಹಾಸನ: ಜೆಸಿಐ ಹಾಸನ ಸಂಜೀವಿನಿ, ಆರೋಗ್ಯ ಇಲಾಖೆ ಸ್ನೇಹ ಕೂಟ ಹಾಗೂ ಎಲೈಟ್ ಆಂಗ್ಲ ಮಾಧ್ಯಮ ಶಾಲೆ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಹೇಮಾವತಿ ನಗರದಲ್ಲಿ ಎಲೈಟ್ ಆಂಗ್ಲ ಮಾಧ್ಯಮ ಶಾಲೆಯ 5ರಿಂದ 7ನೇ ತರಗತಿಯ ಮಕ್ಕಳಿಗೆ ಕನ್ನಡದಲ್ಲಿ ಕ್ವಿಜ್ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು. ತಾಲೂಕು ಆರೋಗ್ಯ ಅಧಿಕಾರಿ ಡಾ. ಮಹೇಶ್ ಉದ್ಘಾಟಿಸಿ, ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳಿಗೆ ಈ ರೀತಿಯ ಕಾರ್ಯಕ್ರಮದಿಂದ ಕನ್ನಡ ಕಲಿಕೆಗಾಗಿ ಪ್ರೋತ್ಸಾಹ ಸಿಗುವುದಾಗಿದ್ದು, ಕನ್ನಡ ಜ್ಞಾನವೃದ್ಧಿಗೆ ಸಹಕಾರಿಯಾಗಿದ್ದ ಈ ರೀತಿಯ ಕಾರ್ಯಕ್ರಮಗಳು ಹೆಚ್ಚೆಚ್ಚು ಮಾಡಲು ತಿಳಿಸಿದರು. ಶಾಲೆಯ ವ್ಯವಸ್ಥಾಪಕ ನರಸಿಂಹ ಮೂರ್ತಿಯವರು ಮಕ್ಕಳಲ್ಲಿ ಕ್ರಿಯಾತ್ಮಕ ಬೆಳವಣಿಗೆಗೆ ಸಹಕಾರಿಯಾಗಿದ್ದು, ಈ ಕಾರ್ಯಕ್ರಮದ ಲಾಭ ಪಡೆದುಕೊಳ್ಳಲು ಮಕ್ಕಳಿಗೆ ತಿಳಿಸಿದರು. ಜೆಸಿಐ ಅಧ್ಯಕ್ಷ ಪ್ರಸಾದ್ ಮಾತನಾಡಿದರು. ವೈದ್ಯಾಧಿಕಾರಿ ಡಾ. ರತ್ನ, ಹಿರಿಯ ಆರೋಗ್ಯ ನಿರೀಕ್ಷಕ ವೆಂಕಟಸ್ವಾಮಿ, ಯತೀಶ್, ಅಪ್ಪಾಜಿಗೌಡ, ಸ್ನೇಹಕೂಟ ಸದಸ್ಯ ಸಂತೋಷ ಮಧು ಶಿವರಾಜ್, ಶುಭ ಸತೀಶ್, ಜೆ.ಸಿ. ಯೋಗೇಶ್ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

