ಕೆರೆ ನಿರ್ವಹಣೆಯಿಂದ ಒತ್ತುವರಿ ತಡೆಯಲು ಸಾಧ್ಯ: ಜಿಲ್ಲಾಧಿಕಾರಿ ಅನ್ಬುಕುಮಾರ್
ಹಾಸನ: ಗ್ರಾಮೀಣ ಪ್ರದೇಶದಲ್ಲಿ ಜನತೆ ಒಗ್ಗಟ್ಟಾಗಿ ಕೆರೆಗಳನ್ನು ನಿರ್ವಹಣೆ ಮಾಡುವುದರಿಂದ ಕೆರೆ ಒತ್ತುವರಿಯನ್ನು ತಡೆಯುವುದರ ಜೊತೆಗೆ ಇಡೀ ಗ್ರಾಮಕ್ಕೆ ಕೆರೆ ಸೇರಿದ್ದು ಎಂಬ ಮನೋಭಾವನೆ ಜನರಲ್ಲಿ ಮೂಡಲು ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ಸಮುದಾಯ ಆಧಾರಿತ ಕೆರೆ ನಿರ್ವಹಣೆ ಯೋಜನೆಯ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಜಲ ಸಂವರ್ಧನ ಯೋಜನೆಯಡಿ 51 ಕೆರೆಗಳನ್ನು ಅಭಿವೃದ್ಧಿಪಡಿಸಿದ್ದಾರೆ. ಗ್ರಾಮಸ್ಥರು ತಮ್ಮ ಅಮೂಲ್ಯ ಸಮಯವನ್ನು ಬಳಸಿ ಶ್ರಮ ವಹಿಸಿ ಕೆಲಸ ಮಾಡಿ ಅಭಿವೃದ್ಧಿಪಡಿಸಿರುವುದು ಸಂತೋಷ ತಂದಿದೆ. ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರಲ್ಲದೆ ಕೆರೆಯ ಅಭಿವೃದ್ಧಿಗಾಗಿ ಶ್ರಮಿಸಿದವರೆಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಜಿಲ್ಲೆಯಲ್ಲಿ ಕೆರೆ ಅಭಿವೃದ್ಧಿಪಡಿಸಿರುವ ಜಲ ಸಂವರ್ಧನ ಸಂಘದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಮೀನುಗಾರಿಕೆ ಇಲಾಖೆ ವತಿಯಿಂದ ಡಿಸೆಂಬರ್ ಎರಡನೇ ವಾರದಲ್ಲಿ ಕಾರ್ಯಾಗಾರ ಏರ್ಪಡಿಸಿ ಇಲಾಖೆಯಿಂದ ದೊರೆಯುವ ಸವಲತ್ತುಗಳ ಕುರಿತು ಮಾಹಿತಿ ನೀಡುವಂತೆ ಮೀನುಗಾರಿಕೆ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು. ಪ್ರತಿ ಗ್ರಾಪಂ.ಗೆ ಉದ್ಯೋಗ ಖಾತರಿ ಯೋಜನೆಯಡಿ ಗಿಡ ಬೆಳೆಸಲು ಅನುದಾನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು. ಪ್ರೊಬೇಷನರಿ ಐಎಎಸ್ ಅಧಿಕಾರಿ ರಾಮಚಂದ್ರ, ಜಂಟಿ ಕೃಷಿ ನಿರ್ದೇಶಕ ಬಿ. ಶಿವರಾಜ್, ಜಲ ಸಂವರ್ಧನಾ ಯೋಜನೆ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಎಸ್.ಬಿ. ನಾಗರಾಜು, ನಾನಾ ಇಲಾಖೆ ಅಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

