ಚನ್ನರಾಯಪಟ್ಟಣ ಒಳಚರಂಡಿ ವ್ಯವಸ್ಥೆಗೆ ಕ್ರಮ: ಸಚಿವ ಸೊರಕೆ
ಹಾಸನ: ಚನ್ನರಾಯಪಟ್ಟಣ 2ನೇ ಹಂತದ ಒಳಚರಂಡಿ ಯೋಜನೆಗೆ ಕರ್ನಾಟಕ ಸರ್ಕಾರದಿಂದ 2004ರ ಫೆ.19ರಲ್ಲಿ 9.16 ಕೋಟಿ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ಈ ಯೋಜನೆಯನ್ನು 2012ರ ಆಗಸ್ಟ್ನಲ್ಲಿ 1,10, 87,000 ವೆಚ್ಚ ಮಾಡಿ ಚಾಲನೆಗೊಳಿಸಿ ಸ್ಥಳೀಯ ಸಂಸ್ಥೆಗೆ ಮುಂದಿನ ನಿರ್ವಹಣೆಗಾಗಿ ಹಸ್ತಾಂತರಿಸಲಾಗಿದೆ ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ವಿನಯ್ಕುಮಾರ್ ಸೊರಕೆ ತಿಳಿಸಿದ್ದಾರೆ.
ಶ್ರವಣಬೆಳಗೊಳ ವಿಧಾನಸಭಾ ಸದಸ್ಯ ಸಿ.ಎನ್. ಬಾಲಕೃಷ್ಣ ಅವರು ಚನ್ನರಾಯಪಟ್ಟಣ ನಗರ ಪ್ರದೇಶದಲ್ಲಿ ಅಳವಡಿಸಲಾಗಿರುವ ಒಳಚರಂಡಿ ವ್ಯವಸ್ಥೆಯನ್ನು ಸರಿಪಡಿಸುವ ಕುರಿತು ಬೆಳಗಾವಿಯಲ್ಲಿ ನಡೆದ ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವರ ಗಮನ ಸೆಳೆದಾಗ ಸಚಿವರು ಇದಕ್ಕೆ ಉತ್ತರಿಸಿ ಮಾತನಾಡಿದರು.
ಚನ್ನರಾಯಪಟ್ಟಣದ ರಾಮೇಶ್ವರ ಬಡಾವಣೆಯ ರೇಲ್ವೆ ಲೈನ್ ಹತ್ತಿರ(16 ಮೀಟರ್), ಕುವೆಂಪು ನಗರದ ಕಾನ್ವೆಂಟ್ ಹತ್ತಿರ(54 ಮೀಟರ್) ಮತ್ತು ವಾರ್ಡ್ ಒಂದರ ಗುರುಮಾರನಹಳ್ಳಿ ಬಳಿ(50 ಮೀಟರ್) ಒಳಚರಂಡಿ ಮಾರ್ಗ ಅಳವಡಿಸಲು ರಸ್ತೆ ಒತ್ತುವರಿ ಹಾಗೂ ಜಮೀನಿನ ತಕರಾರು ಇರುವುದರಿಂದ ಈ ಜಾಗಗಳಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗಿರುವುದಿಲ್ಲ. ಈ ಬಗ್ಗೆ ಸ್ಥಳೀಯ ಸಂಸ್ಥೆ ವತಿಯಿಂದ ತಕರಾರು ಬಗೆಹರಿಸಿ ಬಾಕಿ ಉಳಿದಿರುವ ಒಳಚರಂಡಿ ಕೊಳವೆ ಮಾರ್ಗಗಳನ್ನು ಶೀಘ್ರವಾಗಿ ಅಳವಡಿಸಲಾಗುವುದು ಎಂದರು. ಸಮಸ್ಯೆಯನ್ನು ಬಗೆಹರಿಸಲು ಚನ್ನರಾಯಪಟ್ಟಣ ನಗರ ಸ್ಥಳೀಯ ಸಂಸ್ಥೆಯೊಂದಿಗೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ವ್ಯವಹರಿಸಿ ಸಮಸ್ಯೆಯನ್ನು ಬಗೆಹರಿಸಲು ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

