ಸರ್ಕಾರದ ಪ್ರತಿಕೃತಿ ದಹಿಸಿ ಆಕ್ರೋಶ
ಕ.ಪ್ರ.ವಾರ್ತೆ ಹಾಸನ ನ.28
ಬೆಳಗಾವಿ ಸುವರ್ಣ ಸೌಧದ ಬಳಿಯೇ ರೈತರ ಆತ್ಮಹತ್ಯೆಗೆ ಕಾರಣವಾಗಿರುವ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್ಎಸ್) ಜಿಲ್ಲಾ ಘಟಕ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಹೇಮಾವತಿ ಪ್ರತಿಮೆ ಬಳಿ ರೈತ ಸಂಘದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರು ಮಾತನಾಡಿ, ಹಲವು ದಿನಗಳಿಂದ ಕಬ್ಬಿನ ಬೆಳೆಗೆ ಸೂಕ್ತ ಬೆಂಬಲ ಬೆಲೆ ನೀಡಬೇಕೆಂದು ಆಗ್ರಹಿಸಿ ರೈತರು ರಾಜ್ಯಾದ್ಯಂತ ಪ್ರತಿಭಟನೆಯನ್ನು ನಡೆಸಿಕೊಂಡು ಬರುತ್ತಿದ್ದ ರೈತರು, ಕಳೆದ ಮೂರು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆಯುತ್ತಿರುವದ ಅಧಿವೇಶನದ ಸಂದರ್ಭದಲ್ಲೂ ನಿರಂತರ ಧರಣಿ ಆರಂಭಿಸಿದ್ದರು. ರೈತರ ಈ ಕೂಗನ್ನು ಕೇಳಿಸಿಕೊಳ್ಳದ ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ಸಕ್ಕರೆ ಮಾಲೀಕರ ಲಾಬಿಗೆ ಮಣಿದು ರೈತರ ಬೆಂಬಲ ಬೆಲೆಯ ಬೇಡಿಕೆಯನ್ನು ಈಡೇರಿಸಲಿಲ್ಲ ಎಂದು ಖಂಡಿಸಿದರು.
ರಾಜ್ಯದಲ್ಲಿ ಈ ಹಿಂದೆ ಇದ್ದ ಬಿಜೆಪಿ ನೇತೃತ್ವದ ಸರ್ಕಾರವು ರೈತರು ರಸಗೊಬ್ಬರ, ಬಿತ್ತನೆ ಬೀಜಕ್ಕಾಗಿ ಹೋರಾಟ ಮಾಡಿದರೆ ಅವರ ಮೇಲೆ ಗೋಲಿಬಾರ್ ಮಾಡಿಸಿ ರೈತರನ್ನು ಬಲಿ ತೆಗೆದುಕೊಂಡಿತ್ತು. ಈಗ ಕಾಂಗ್ರೆಸ್ ನೇತೃತ್ವದ ಸರ್ಕಾರವು ಅದೇ ರೀತಿಯ ಧೋರಣೆಯನ್ನು ಅನುಸರಿಸುತ್ತಿದ್ದು, ರೈತರ ಆತ್ಮಹತ್ಯೆಗೆ ಕಾರಣವಾಗಿದೆ. ಇದರಿಂದ ಕಾಂಗ್ರೆಸ್ ಮತ್ತು ಬಿಜೆಪಿಗಳು ಒಂದೇ ರೀತಿಯ ನೀತಿಗಳನ್ನು ಅನುಸರಿಸುತ್ತಿರುವುದು ಸ್ಪಷ್ಟವಾಗುತ್ತಿದೆ. ದೇಶದ ಅನ್ನದಾತ ಆತ್ಮಹತ್ಯೆಯ ದಾರಿ ಹಿಡಿದರೆ ಅದರಿಂದ ದೇಶದ ಅಭಿವೃದ್ಧಿಯಾಗಲು ಖಂಡಿತ ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ನೇತೃತ್ವವನ್ನು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಎಚ್.ಆರ್. ನವೀನ್ಕುಮಾರ್, ತಾಲೂಕು ಅಧ್ಯಕ್ಷ ನಂಜೇಗೌಡ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಧರ್ಮೇಶ್, ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

