ಸುದ್ದಿ ಸಂಕ್ಷೇಪ
ಚಂಡಿಕಾ ಹೋಮ
ಹಾರನಹಳ್ಳಿ: ಶ್ರೀರಾಮ ಸೇವಾ ಸಮಿತಿ, ಬ್ರಾಹ್ಮಣ ಸಮಾಜ, ಹಾರನಹಳ್ಳಿ ಇವರ ವತಿಯಿಂದ ಡಿ.1ಂದು ಕೋಡಮ್ಮ ದೇವಿಯವರ ಮೂಲ ಸನ್ನಿಧಾನದಲ್ಲಿ ಕಾರ್ತೀಕ ಮಾಸದ ಅಂಗವಾಗಿ ಚಂಡಿಕಾ ಹೋಮವನ್ನು ಏರ್ಪಡಿಸಲಾಗಿದೆ. ಮಧ್ಯಾಹ್ನ 12ಕ್ಕೆ ಸತ್ಸಂಗ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಹಿರೇಮಠ ತುಮಕೂರು ಬ್ರಹ್ಮಾನಂದ ಗುರೂಜಿ ಭರಮಸಾಗಭಿವರು ಸಾನ್ನಿಧ್ಯ ವಹಿಸಲಿದ್ದಾರೆ. ಲೋಕ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಅಶೋಕ್ ಹಾರ್ನಳ್ಳಿ ಅಧ್ಯಕ್ಷತೆ ವಹಿಸುವರು. ತಹಸೀಲ್ದಾರ್ ಕೇಶವಮೂರ್ತಿ ಭಾಗವಹಿಸುವರು. ಕಾರ್ಯಕ್ರಮಕ್ಕೆ ಭಕ್ತರು, ಕುಲಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಶ್ರೀರಾಮ ಸೇವಾ ಸಮಿತಿ, ಬ್ರಾಹ್ಮಣ ಸಮಾಜ ಕೋರಿದೆ.
ವಿದ್ಯಾರ್ಥಿ ಆತ್ಮಹತ್ಯೆ
ಹಾಸನ: ನಗರದ ವಿದ್ಯಾರ್ಥಿಯೊಬ್ಬ ಜಿಗುಪ್ಸೆಗೊಂಡು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಗರದ ವಿಶ್ವೇಶ್ವರಯ್ಯ ಬಡಾವಣೆ ನಿವಾಸಿ ಅರಕಲಗೂಡಿನ ಎಸ್‌ಬಿಐ ಬ್ಯಾಂಕ್‌ನಲ್ಲಿ ಉದ್ಯೋಗಿ ನಾಗರಾಜ್ ಎಂಬುವರ ಪುತ್ರ ಹರ್ಷಿತ್(17) ಎಂಬುವನೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಆತ ನಗರದ ಶ್ರೀ ವೆಂಕಟೇಶ್ವರ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಈತನ ತಾಯಿ ಸಾವನ್ನಪ್ಪಿದ ಮೇಲೆ ತಂದೆ ನಾಗರಾಜ್ ಮೆಡಿಕಲ್ ಕಾಲೇಜಿನಲ್ಲಿ ಎಫ್‌ಡಿಸಿಯಾಗಿ ಕೆಲಸ ನಿರ್ವಹಿಸುತ್ತಿರುವ ಕಾಂತಾ ಎಂಬುವರನ್ನು ಎರಡನೇ ಮದುವೆ ಮಾಡಿಕೊಂಡಿದ್ದರು. ನಂತರದ ದಿವಸಗಳಲ್ಲಿ ಬೇಸತ್ತ ಹರ್ಷಿತ್ ನೇಣಿಗೆ ಶರಣಾಗಿದ್ದಾನೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ನಾಗರಾಜ್ ಅವರ ಮತ್ತೊಬ್ಬ ಪುತ್ರ ಸುಪ್ರೀತ್ 8ನೇ ತರಗತಿ ಮೂಡುಬಿದಿರೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಹಾಸನ ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

