ಹಾಸನ

ಅಧಿಕಾರಿಗಳಿಗೆ ಮತದಾರರ ಪರಿಷ್ಕರಣಾ ತರಬೇತಿ

Published On :

ಜಾವಗಲ್: ಜಾವಗಲ್‌ನಲ್ಲಿ ಬೂತ್ ಮಟ್ಟದ ಅಧಿಕಾರಿಗಳಿಗಾಗಿ ಸಾರ್ವತ್ರಿಕ ಚುನಾವಣೆ ಸಂಬಂಧ ಮತದಾರರ ಪರಿಷ್ಕರಣಾ ಪಟ್ಟಿ ತರಬೇತಿ ಕಾರ್ಯಾಗಾರವನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು.
ಕಾರ್ಯಾಗಾರದಲ್ಲಿ ತಾಲೂಕು ಕಚೇರಿ ಚುನಾವಣಾ ಶಾಖೆ ಉಪ ತಹಸೀಲ್ದಾರ್ ಪೆರುಮಾಳ್ ಚುನಾವಣಾ ಆಯೋಗದ ನಿರ್ದೇಶನದಂತೆ ಅ.31ಕ್ಕೆ ಮತದಾರರ ಕರಡು ಪಟ್ಟಿಯನ್ನು ಪ್ರಚುರಪಡಿಸಲಾಗಿದೆ. ನ.29ರವರೆಗೆ ನಮೂನೆ 6,7,8, ಮತ್ತು 8ಎ.ಗಳಲ್ಲಿ ಅರ್ಜಿಗಳನ್ನು ಸ್ವೀಕರಿಸುವಂತೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಾವಗಲ್ ನಾಡ ಕಚೇರಿ ಉಪ ತಹಸೀಲ್ದಾರ್ ಅಶೋಕ್ ಮಾತನಾಡಿ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ವರ್ಗಾವಣೆ, ಹೆಸರು ಕೈಬಿಡುವುದು ಮತ್ತು ತಿದ್ದುಪಡಿಗಳ ಬಗ್ಗೆ ಮಾಹಿತಿ ನೀಡಿ ಬಿಎಲ್‌ಒಗಳು ಗ್ರಾಮ ಲೆಕ್ಕಿಗರ ಸಹಕಾರದೊಂದಿಗೆ ಕಡ್ಡಾಯವಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಜಾವಗಲ್ ಹೋಬಳಿ ರಾಜಸ್ವ ನಿರೀಕ್ಷಕ ಮುದ್ದುವೀರಯ್ಯ, ಹೋಬಳಿಯ 57 ಬಿಎಲ್‌ಒ ಮತ್ತು ಗ್ರಾಮ ಲೆಕ್ಕಿಗರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.