ಹಾಸನ

ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿ ಪೂರ್ಣಕ್ಕೆ ಸೂಚನೆ

Published On :

ಹಾಸನ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕಾಲೋನಿಗಳಲ್ಲಿ 2009-10 ಹಾಗೂ 10-11 ಸಾಲಿನಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವುದರ ಜೊತೆಗೆ ಗುಣಮಟ್ಟಕ್ಕೆ ಮೊದಲ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕಾಲೋನಿಗಳಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕಾಲೋನಿಗಳಲ್ಲಿ ಸಮುದಾಯ ಭವನ ನಿರ್ಮಿಸಲು ನಿವೇಶನಕ್ಕೆ ಸಂಬಂದಿಸಿದಂತೆ ತಕರಾರುಗಳಿದ್ದರೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಜವಾಬ್ದಾರಿ ವಹಿಸಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಸಮಸ್ಯೆಯನ್ನು ಒಂದು ವಾರದೊಳಗೆ ಬಗೆಹರಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಕಾಮಗಾರಿಗಳು ಪೂರ್ಣಗೊಳ್ಳುವುದು ವಿಳಂಬವಾದರೆ ಜನತೆ ಸೌಲಭ್ಯದಿಂದ ವಂಚಿತರಾಗುತ್ತಾರೆ ಎಂದರು. ಇಂತಹ ಪ್ರಶ್ನೆಗಳಿಗೆ ಅವಕಾಶ ನೀಡದೆ ಅಧಿಕಾರಿಗಳು ಎಚ್ಚೆತ್ತು ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಕುಡಿಯುವ ನೀರು, ಸಮುದಾಯ ಭವನ, ರಸ್ತೆ, ಚರಂಡಿ ಕಾಮಗಾರಿಗಳನ್ನು ಪಂಚಾಯತ್ ರಾಜ್ ಹಾಗೂ ಲೋಕೋಪಯೋಗಿ ಕಾರ್ಯಪಾಲಕ ಎಂಜಿನಿಯರ್‌ಗಳು ತಮಗೆ ಸಂಬಂಧಪಟ್ಟ ಕಾಮಗಾರಿಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಕಾಮಗಾರಿವಾರು ಪ್ರಗತಿ ಪರಿಶೀಲಿಸಿ ಕ್ರಮವಹಿಸುವಂತೆ ತಿಳಿಸಿದರು.
ಪ್ರೊಬೇಷನರಿ ಐಎಎಸ್ ಅಧಿಕಾರಿ ರಾಮಚಂದ್ರ, ಜಿಪಂ ಉಪ ಕಾರ್ಯದರ್ಶಿ ಕರಿಯಪ್ಪ, ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪುರುಷೋತ್ತಮ್ ಹಾಗೂ ನಾನಾ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.