ಹಾಸನ

ಸುದ್ದಿ ಸಂಕ್ಷೇಪ

Published On :

ಡಿ.1ರಂದು ಕಥಾ ಸಂಕಲನ ಬಿಡುಗಡೆ
ಹಾಸನ: ಹಾಡಹಳ್ಳಿ ಪಬ್ಲಿಕೇಷನ್ ವತಿಯಿಂದ ತಿರುಪತಿಹಳ್ಳಿ ಶಿವಶಂಕಪ್ಪ ಅವರ ವಾಡೆ ಕಥಾ ಸಂಕಲನ ಬಿಡುಗಡೆ ಸಮಾರಂಭ ಡಿ.1ರಂದು ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆಯಲಿದೆ. ಹಿರಿಯ ಪತ್ರಕರ್ತ ಆರ್.ಪಿ. ವೆಂಕಟೇಶಮೂರ್ತಿ ಉದ್ಘಾಟಿಸುವರು. ಲೇಖಕ ವಸುಧೇಂದ್ರ ಅಧ್ಯಕ್ಷತೆ ವಹಿಸುವರು. ಕಥೆಗಾರ ಡಾ. ಪ್ರಹ್ಲಾದ್ ಅಗಸನಕಟ್ಟೆ ಅವರು ಕೃತಿ ಬಿಡುಗಡೆ ಮಾಡುವರು. ಸಾಹಿತಿ ಡಾ. ಬಾಳಾಸಾಹೇಬ ಲೋಕಾಪುರ ಕೃತಿ ಪರಿಚಯಿಸುವರು. ಸಾಹಿತಿ ಹಾಡ್ಲಹಳ್ಳಿ ನಾಗರಾಜು ಭಾಗವಹಿಸುವರು.
ನಾಳೆ ರಾಜ್ಯೋತ್ಸವ
ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘ, ಶ್ರೀ ಮಾರುತಿ ಯುವಕರ ಸಂಘ ಹಾಗೂ ವಿದ್ಯಾನಗರ ಗೆಳೆಯರ ಬಳಗದ ಆಶ್ರಯದಲ್ಲಿ ನ.30ರಂದು ವಿದ್ಯಾನಗರದ ಕೆನರಾಬ್ಯಾಂಕ್ ಎದುರಿನ ಬುದ್ಧಮಾರ್ಗದಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬೆಳಗ್ಗೆ 10ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ. ಸಂಜೆ 5.30ಕ್ಕೆ ಬೆಂಗಳೂರಿನ ಮೋಹನ್ಸ್ ಮ್ಯೂಸಿಕ್ ತಂಡದಿಂದ ಹಾಗೂ ಹಿನ್ನೆಲೆ ಗಾಯಕ ಹೇಮಂತ್ ಅವರಿಂದ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬಿ.ಪಿ. ಮಂಜೇಗೌಡ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಎಚ್.ಎಸ್. ಪ್ರಕಾಶ್ ಅಧ್ಯಕ್ಷತೆ ವಹಿಸುವರು. ರವಿ ಡಿ. ಚನ್ನಣ್ಣನವರ್, ಚಿತ್ರನಟ ಧರ್ಮ, ನಟಿ ಮಿಲನ ಭಾಗವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.