ಆಹ್ವಾನ ಪತ್ರಿಕೆಯಲ್ಲಿ ಬಾಲಕೃಷ್ಣ ಚಿತ್ರಕ್ಕೆ ವಿರೋಧ
ಚನ್ನರಾಯಪಟ್ಟಣ: ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ನಿರ್ಮಿಸಿರುವ ನೂತನ ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ಸ್ಥಳೀಯ ಶಾಸಕ ಸಿ.ಎನ್. ಬಾಲಕೃಷ್ಣ ಅವರ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿ ಆಹ್ವಾನಿಸಿರುವುದು ಖಂಡನೀಯ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಚೋಳೇನಹಳ್ಳಿ ಜಯರಾಮು ಆರೋಪಿಸಿದ್ದಾರೆ.
ವಿಧಾನಸಭಾ ಚುನಾವಣೆಗೂ ಮುನ್ನಾ ಮೇ 15ರಂದು ತಾವು ಸಿ.ಎನ್. ಬಾಲಕೃಷ್ಣ ಅವರು ಜಿಪಂ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ನಡೆದಿರುವ ಅವ್ಯವಹಾರದ ದಾಖಲೆಯನ್ನು ಸಂಗ್ರಹಿಸಿ ತನಿಖೆ ನಡೆಸುವಂತೆ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರು. ಲೋಕಾಯುಕ್ತರಿಗೂ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ನ್ಯಾಯಾಲಯದಲ್ಲಿ ತನಿಖೆ ನಡೆಯುತ್ತಿದ್ದು, ಈ ಬಗ್ಗೆ ಲೋಕಾಯುಕ್ತ ಪೊಲೀಸರು ಸಿ.ಎನ್. ಬಾಲಕೃಷ್ಣ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ.
ಎಫ್ಐಆರ್ ದಾಖಲಾಗಿರುವ ಹಿನ್ನೆಲೆ ಹಾಗೂ ಪ್ರಕರಣ ನ್ಯಾಯಾಲಯ ಮೆಟ್ಟಿಲೇರಿರುವುದರಿಂದ ಅವರು ಯಾವುದೇ ಅಧಿಕಾರದಲ್ಲಿದ್ದರೂ ನ್ಯಾಯಾಲಯಕ್ಕೆ ಬೆಲೆ ನೀಡಬೇಕಾಗಿರುವುದರಿಂದ ನ್ಯಾಯಾಲಯದ ಯಾವುದೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಿಷಿದ್ಧವಿದ್ದರೂ ಅವರನ್ನು ಆಹ್ವಾನಿಸಿರುವುದು ನ್ಯಾಯಾಲಯದ ಒಳಿತಿಗೆ ಸರಿಯಿಲ್ಲ.
ಈ ಬಗ್ಗೆ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ರಾಜ್ಯದ ಮುಖ್ಯ ನ್ಯಾಯಾಧೀಶರು ಹಾಗೂ ಜಿಲ್ಲೆಗೆ ನಿಯೋಜನೆಗೊಂಡಿರುವ ಹೈಕೋರ್ಟ್ ನ್ಯಾಯಾಧೀಶರಿಗೆ ಎಫ್ಐಆರ್ ವರದಿ ಹಾಗೂ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣದ ಪ್ರತಿಗಳನ್ನು ನೀಡಲಾಗಿದೆ ಎಂದು ಜಯರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

