ಕನ್ನಡ ಕೇವಲ ಭಾಷೆಯಲ್ಲ, ಅದೊಂದು ಪರಂಪರೆ: ಡಾ. ಶ್ರೀನಿವಾಸ್
ಕ.ಪ್ರ.ವಾರ್ತೆ ಹಾಸನ ನ.29
ಕನ್ನಡ ಎಂಬುದು ಕೇವಲ ಭಾಷೆ ಮಾತ್ರವಲ್ಲ. ಅದು ಒಂದು ಸಂಸ್ಕೃತಿ, ಪರಂಪರೆ. ಇವು ನಮ್ಮ ಅಸ್ತಿತ್ವದ ಕುರುಹು. ಇವನ್ನು ಮೈಗೂಡಿಸಿಕೊಂಡು ಕನ್ನಡ ಸಂಸ್ಕತಿಯ ಪ್ರಚಾರಕರಾಗಿ ಎಂದು ಮೊಸಳೆ ಹೊಸಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಡಿ. ಶ್ರೀನಿವಾಸ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು.
ಹಾಸನದ ವಾಣಿ ವಿಲಾಸ ಸರ್ಕಾರಿ ಪಪೂ ಕಾಲೇಜಿನ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಪ್ರಧಾನ ಭಾಷಣಕಾರರಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಕಾಲೇಜಿನಲ್ಲಿ ರೆಡ್ ರಿಬ್ಬನ್ ಘಟಕವನ್ನು ಉದ್ಘಾಟಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಪಿ.ಎಲ್. ಶ್ಯಾಮಲಾದೇವಿ ಮಾತನಾಡಿ, ಹದಿಹರೆಯದಲ್ಲಿ ವಿಷಯಗಳ ಅರಿವಿಲ್ಲದೆ ಅನೇಕ ಆಪತ್ತುಗಳಿಗೆ ಯುವಜನತೆ ಬಲಿಯಾಗುತ್ತಿದೆ. ಅದರಲ್ಲಿ ಏಡ್ಸ್ ಮಾರಕ ಕಾಯಿಲೆಯೂ ಒಂದು. ಮುಖ್ಯವಾಗಿ ಕಾಲೇಜುಗಳಲ್ಲಿ ಇಂತಹ ಘಟಕಗಳ ಮೂಲಕ ಅರಿವನ್ನು ಮೂಡಿಸುವುದು ಇಂದು ಅತ್ಯಂತ ಅವಶ್ಯಕವಾಗಿದೆ ಎಂದು ಹೇಳಿದರು.
ಏಡ್ಸ್ ನಿಯಂತ್ರಣ ಕುರಿತು ಜಿಲ್ಲಾ ಏಡ್ಸ್ ನೋಡೆಲ್ ಅಧಿಕಾರಿ ಡಾ. ಪಿ.ಎಲ್. ನಟರಾಜ್, ರಕ್ತ ಸುರಕ್ಷತೆ ಮತ್ತು ರಕ್ತದಾನ ಕುರಿತು ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕದ ಜಿಲ್ಲಾ ಮೇಲ್ವಿಚಾರಕ ಬಿ.ಎಂ. ರವಿಕುಮಾರ್ ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು. ಆರೋಗ್ಯ ಶಿಕ್ಷಣಾಧಿಕಾರಿ ಶಬ್ಬೀರ್ ಅಹಮದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಜಿ.ಸಿ. ಶಿವಣ್ಣ ಅಧ್ಯಕ್ಷತೆ ವಹಿಸಿದ್ದರು.
ವಿದ್ಯಾರ್ಥಿನಿ ಭವಾನಿ ಪ್ರಾರ್ಥಿಸಿ, ಸ್ವಾಗತಿಸಿದರು. ಅಸ್ಮಾ ವಂದಿಸಿದರು. ಉಪನ್ಯಾಸಕ ಗೊರೂರು ಶಿವೇಶ್ ಕಾರ್ಯಕ್ರಮ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

