ಹಾಸನ

ಕ್ಯಾನ್ಸರ್ ಅರಿವು ಮೂಡಿಸುವ ಕಾರ್ಯಕ್ರಮ

Published On :

ಚನ್ನರಾಯಪಟ್ಟಣ: ಯುವತಿಯರು ಹಾಗೂ ಪ್ರೌಢಾವಸ್ಥೆಯಲ್ಲಿರುವ ಬಾಲಕಿಯರಿಗೆ ತಮ್ಮ ಆರೋಗ್ಯದ ಅರಿವು ಮುಖ್ಯವಾಗಿದೆ ಎಂಬ ಗುರಿಯಿಟ್ಟುಕೊಂಡು ಬೆಂಗಳೂರಿನ ಕ್ಯಾನ್ಸರ್ ಕೇರ್ ಇಂಡಿಯಾ, ಪೂನಂಚಂದ್ ಸೇಠಿ ಚಾರಿಟಬಲ್ ಟ್ರಸ್ಟ್ ಹಾಗೂ ಶ್ರವಣಬೆಳಗೊಳದ ಕೂಷ್ಮಾಂಡಿನಿ ಮಹಿಳಾ ಸಮಾಜದ ವತಿಯಿಂದ ಕ್ಯಾನ್ಸರ್ ರೋಗದ ಅರಿವು ಹಾಗೂ ಮುನ್ನೆಚ್ಚರಿಕೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಶ್ರವಣಬೆಳಗೊಳದ ಸುತ್ತಮುತ್ತಲಿನ ಕಾಲೇಜು ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಸ್ತನ, ಬಾಯಿ ಹಾಗೂ ಹಾಗೂ ಗರ್ಭಕೋಶದ ಕ್ಯಾನ್ಸರ್ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡು 750ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಕ್ಯಾನ್ಸರ್ನಿಂದ ಆಗುವ ದುಷ್ಪರಿಣಾಮಗಳು ಹಾಗೂ ಅದನ್ನು ತಡೆಗಟ್ಟುವ ಬಗ್ಗೆ ಅರಿವು ಮೂಡಿಸಿದ್ದಲ್ಲದೆ ಕಾಯಿಲೆಯ ಮುನ್ಸೂಚನೆಗಳನ್ನು ವಿಡಿಯೋ ಚಿತ್ರೀಕರಣದ ಮೂಲಕ ಪ್ರದರ್ಶಿಸಿ ಹೆಣ್ಣು ಮಕ್ಕಳ ಆರೋಗ್ಯದ ಬಗ್ಗೆ ತೀವ್ರ ಆಸಕ್ತಿ ತೋರಿದೆ. ಪೂನಂಚಂದ್ ಸೇಠ್ ಚಾರಿಟಬಲ್ ಟ್ರಸ್ಟ್ನ ಸಂಚಾಲಕಿ ಆಶಾ ಪ್ರಭು ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮಹಿಳೆಯರಲ್ಲಿ ಸ್ತನ, ಬಾಯಿ ಹಾಗೂ ಗರ್ಭಕೋಶದಲ್ಲಿ ಕ್ಯಾನ್ಸರ್ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ರೋಗ ಕಾಣಿಸಿಕೊಳ್ಳುವ ಐದು ವರ್ಷ ಮುಂಚಿತವಾಗಿಯೇ ಕೆಲವು ಪರೀಕ್ಷೆಗಳಿಂದ ತಿಳಿಯಬಹುದಾಗಿದ್ದು, ಈ ಬಗ್ಗೆ ವಿದ್ಯಾರ್ಥಿನಿಯರಿಗೆ ಅರಿವು ಮೂಡಿಸಿದರೆ ಅವರು ಅವರ ಪೋಷಕರಿಗೆ ವಿಷಯ ತಿಳಿಸುವುದರಿಂದ ರೋಗದ ಬಗ್ಗೆ ಪರೀಕ್ಷೆ ಮಾಡಿಸಿಕೊಳ್ಳಲು ಮುಂದಾಗುತ್ತಾರೆ ಎಂದು ತಿಳಿಸಿದರು. ತಾಲೂಕಿನ ಕಾಂತರಾಜಪುರ, ದಮ್ಮನಿಂಗಲ, ಹಳೆಬೆಳಗೊಳ, ಜುಟ್ಟನಹಳ್ಳಿ, ಶ್ರವಣಬೆಳಗೊಳದ ಎಲ್ಲಾ ಕಾಲೇಜು ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿನಿಯರಿಗೆ ಅರಿವು ಮೂಡಿಸಿದರು. ಕ್ಯಾನ್ಸರ್ ಕೇರ್ ಇಂಡಿಯಾ ಸಂಘಟನೆಯ ಕಾಮೇಶ್ವರಿ, ಗೊಮ್ಮಟವಾಣಿ ಸಂಪಾದಕ ಅಶೋಕ್ಕುಮಾರ್, ಕೂಷ್ಮಾಂಡಿನಿ ಮಹಿಳಾ ಸಮಾಜದ ಪದಾಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.