ರಾಜ್ಯೋತ್ಸವ; ಗಣ್ಯರಿಗೆ ಸನ್ಮಾನ
ಸಕಲೇಶಪುರ: ನಾಡು, ನುಡಿಗಳ ರಕ್ಷಣೆಗೆ ಜಯ ಕರ್ನಾಟಕ ಸಂಘಟನೆಯು ಬದ್ಧವಾಗಿದ್ದು, ಇದಕ್ಕಾಗಿ ಹಲವಾರು ಸಮಾಜದ ಪರ ಕೆಲಸಗಳನ್ನು ರಾಜ್ಯಾದ್ಯಂತ ಸಂಘಟನೆ ವತಿಯಿಂದ ಮಾಡಲಾಗುತ್ತಿದೆ ಎಂದು ಜಯ ಕರ್ನಾಟಕ ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷ ಪ್ರಕಾಶ್ ರೈ ಹೇಳಿದ್ದಾರೆ. ತಾಲೂಕಿನ ಕುನಿಗನಹಳ್ಳಿ ಗ್ರಾಮದಲ್ಲಿ ಜಯ ಕರ್ನಾಟಕ ಸಂಘದ ವತಿಯಿಂದ 2ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ಜಯ ಕರ್ನಾಟಕ ಸಂಘಟನೆಯಲ್ಲಿ ಸಾವಿರಾರು ಕಾರ್ಯಕರ್ತರು ಯಾವುದೇ ರೀತಿಯ ಭೇದಭಾವ ಮಾಡದೇ ಸಮಾಜದ ಏಳಿಗೆಗಾಗಿ ಕೆಲಸ ಮಾಡುತ್ತಿದ್ದು ರಾಜ್ಯದ ಹಿತಕ್ಕಾಗಿ ತಮ್ಮನ್ನು ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರೆ ಎಂದರು.
ಕಾರ್ಯಕ್ರಮದ ಅಂಗವಾಗಿ ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಹಯೋಗದಲ್ಲಿ ಎಚ್.ಡಿ ಸೋಮೇಶ್ ಅವರ ಸುಗಮ ಸಂಗೀತ ಕಾರ್ಯಕ್ರಮ, ರಕ್ತದಾನ ಶಿಬಿರ, ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯರಿಗೆ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಜಯ ಕರ್ನಾಟಕ ಘಟಕದ ತಾಲೂಕು ಅಧ್ಯಕ್ಷ ಸುಪ್ರದೀಪ್ತ ಯಜಮಾನ್, ಕಾರ್ಯದರ್ಶಿ ಸುರೇಶ್ ಆಳ್ವ, ಕುನಿಗನಹಳ್ಳಿ ಘಟಕದ ಅಧ್ಯಕ್ಷ ಪ್ರಕಾಶ್, ಜಿಪಂ ಸದಸ್ಯೆ ಸುಲೋಚನಾ ರಾಮಕೃಷ್ಣ, ಜೆಡಿಎಸ್ ಮುಖಂಡ ಯಾದಗಾರ್ ಇಬ್ರಾಹಿಂ, ಬಿ.ಕೆ ಮೋಹನ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

