ಹಾಸನ

ಇಂದು ಖರೀದಿ ಕೇಂದ್ರ ಆರಂಭ

Published On :

ಹೊಳೆನರಸೀಪುರ/ಹಾಸನ: ಸರ್ಕಾರದ ಆದೇಶದಂತೆ ರಾಜ್ಯ ಸರ್ಕಾರವು ನಿರ್ಧರಿಸಿರುವ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸುವ ಕೇಂದ್ರವನ್ನು ಇಲ್ಲಿನ ಎಪಿಎಂಸಿ ಆವರಣದಲ್ಲಿ ಡಿ.1ರಿಂದ ಚಾಲನೆ ನೀಡಲಾಗುವುದು ಎಂದು ಎಪಿಎಂಸಿ ಕಾರ್ಯದರ್ಶಿ ಮಹೇಶ್ ತಿಳಿಸಿದ್ದಾರೆ. ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಬೆಳಗ್ಗೆ 10 ಕ್ಕೆ ಎಪಿಎಂಸಿ ಅಧ್ಯಕ್ಷ ಎಚ್.ಎಸ್. ಸುದರ್ಶನ್ ಉದ್ಘಾಟಿಸಲಿದ್ದು, ತಹಸೀಲ್ದಾರ್ ಆರ್.ಬಿ. ಶಿವಶಂಕರಪ್ಪ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ತಿಳಿಸಿರುವ ಎಪಿಎಂಸಿಯ ಕಾರ್ಯದರ್ಶಿ ಮಹೇಶ್ ಅವರು, ರೈತರು ಸರ್ಕಾರವು ನಿಗದಿಪಡಿಸಿರುವ ಬೆಂಬಲ ಬೆಲೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕೋರಿದ್ದಾರೆ.
ಪಶು ಆಹಾರ ಘಟಕದಿಂದ: ರೈತರು ಬೆಳೆದ ಮೆಕ್ಕೆಜೋಳವನ್ನು ಇಲ್ಲಿನ ಪಶು ಆಹಾರ ಘಟಕ ಖರೀದಿಸುತ್ತದೆ ಎಂದು ಹಾಸನದ ಪಶು ಆಹಾರ ಘಟಕ ವ್ಯವಸ್ಥಾಪಕ ನಿರ್ದೇಶಕ ಎಂ.ಡಿ. ವಿವೇಕ್ ಬಾಬು ತಿಳಿಸಿದ್ದಾರೆ.
ಆರೋಗ್ಯ ತಪಾಸಣೆ
ಮೈಸೂರು: ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು, ವಾಜಪೇಯಿ ಆರೋಗ್ಯಶ್ರೀ ಯೋಜನೆಯಡಿ ಡಿ.2ರ ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ಹಾಸನ ಜಿಲ್ಲೆ ಅರಸೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿದೆ. ಹೃದ್ರೋಗ, ನರರೋಗ ಶಸ್ತ್ರಚಿಕಿತ್ಸೆ, ಮೂತ್ರರೋಗ, ಗ್ರಂಥಿ ಶಸ್ತ್ರಚಿಕಿತ್ಸೆ ಹಾಗೂ ದೈಹಿಕ ಆಘಾತಗಳಿಗೆ ತಪಾಸಣೆ ನಡೆಸಲಾಗುವುದು. ವಿಶೇಷವಾಗಿ ಬಿಪಿಎಲ್, ಅಕ್ಷಯ, ಅಕ್ಷಯ ಅನಿಲ ರಹಿತ, ಅಂತ್ಯೋದಯ ಕಾರ್ಡ್ದಾರರಿಗೆ ಈ ಶಿಬಿರ ಆಯೋಜಿಸಲಾಗಿದೆ ಎಂದು ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಆರ್. ಅಶೋಕ್ ತಿಳಿಸಿದ್ದಾರೆ. ವಿವರಕ್ಕೆ ಮೊ. 96206 25258 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.