ಹಾಸನ

ಬಿಎಸ್ಪಿ 3 ದಿನಗಳ ಧರಣಿ ಅಂತ್ಯ

Published On :

ಕ.ಪ್ರ.ವಾರ್ತೆ   ಹಾಸನ   ನ.30
ವಿ. ಬಾಲಸುಬ್ರಮಣ್ಯನ್ ಸಮಿತಿ ವರದಿ ಒಪ್ಪಿಕೊಂಡು ಬಗರ್ಹುಕುಂ ಸಾಗುವಳಿ ಸಕ್ರಮಗೊಳಿಸಿ ಭೂ ರಹಿತರಿಗೆ ಭೂಮಿ ಕೊಡುವಂತೆ ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ(ಬಿಎಸ್ಪಿ) ಕೈಗೊಂಡಿರುವ ಮೂರು ದಿನಗಳ  ಧರಣಿಯನ್ನು ಕಡೆಯ ದಿನವಾದ ಶನಿವಾರ ಅಂತ್ಯಗೊಳಿಸಲಾಯಿತು.
ಪ್ರತಿಭಟನಕಾರರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ತಡವಾಗಿ ಸರ್ಕಾರ ಜಾರಿಗೆ ತಂದ ಭೂ ಸುಧಾರಣಾ ಕಾಯ್ದೆಯು ನೂರಾರು ವರ್ಷಗಳ ಕಾಲ ಗುಲಾಮ ಗೇಣಿದಾರರನ್ನಾಗಿ ಬದುಕುತ್ತಿದ್ದ ಕೃಷಿ ಕಾರ್ಮಿಕನಿಗೆ ಭೂ ಮಾಲೀಕನಾಗುವ ಅವಕಾಶ ಕಲ್ಪಿಸಿತ್ತು. ಆದರೆ ಕಾನೂನು ತೊಡಕು, ನ್ಯಾಯ ವಿಳಂಬನೆ, ಭ್ರಷ್ಟ ಆಡಳಿತ ವ್ಯವಸ್ಥೆ ಮತ್ತು ಸ್ವಾರ್ಥ ರಾಜಕಾರಣದಿಂದಾಗಿ ಈ ಕಾಯ್ದೆಯು ಸಮರ್ಪಕವಾಗಿ ಜಾರಿಯಾಗಿಲ್ಲ. ಆ ಕಾರಣದಿಂದ ಆಸ್ತಿಯ ಅಸಮಾನ ಹಂಚಿಕೆ ಹಾಗೆಯೇ ಉಳಿದಿದೆ ಎಂದು ಆರೋಪಿಸಿದರು.
ಸರ್ಕಾರ ತಕ್ಷಣ ಕಾರ್ಯೋನ್ಮುಖವಾಗಿ ವಿ. ಬಾಲಸುಬ್ರಮಣಿ ಸಮಿತಿಯ ವರದಿ ಒಪ್ಪಿಕೊಳ್ಳಬೇಕು. ಎಸ್ಸಿ, ಎಸ್ಟಿ ಹಿಂದುಳಿದ ಜಾತಿಯ ಮತ್ತು ಭೂರಹಿತರು ರಾಜ್ಯಾದ್ಯಂತ ಅಕ್ರಮವಾಗಿ ಸಾಗುವಳಿ ಮಾಡಿಕೊಂಡು ನಮೂನೆ 50, 53ರ ಪ್ರಕಾರ ಅರ್ಜಿ ಸಲ್ಲಿಸಿರುವ ಭೂಮಿಯನ್ನು ಸಕ್ರಮಗೊಳಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಬಿ.ಸಿ. ರಾಜೇಶ್, ದೇವರಾಜ್, ಹರೀಶ್, ಕುಮಾರ್ ಗೌರವ್, ಸ್ವೀವನ್ ಪ್ರಕಾಶ್, ಲಕ್ಷ್ಮಣ್ ಕೀರ್ತಿ, ಎ.ಪಿ. ಅಹಮದ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.