ಚಂದನಗೆ ಕನ್ನಡ ಮಾಧ್ಯಮ ಪ್ರಶಸ್ತಿ
ಜಾವಗಲ್: ಜಾವಗಲ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡಿ 2012-13ನೇ ಸಾಲಿನ ಪರೀಕ್ಷೆಯಲ್ಲಿ 600 ಅಂಕಗಳಿಗೆ 552 ಅಂಕಗಳಿಸಿ ಶೇ 92 ರಷ್ಟು ಅಂಕಗಳಿಸಿದ್ದ ಎಲ್.ಜಿ. ಚಂದನ ಕನ್ನಡ ಮಾಧ್ಯಮದಲ್ಲಿ ಉತ್ತರಿಸಿ ಅತಿ ಹೆಚ್ಚು ಅಂಕಗಳಿಸಿದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯಾಗಿದ್ದಾಳೆ. ವಾಣಿಜ್ಯ ಶಾಸ್ತ್ರದ ಉಪನ್ಯಾಸಕಿ ತಬಸಂ ಅವರು ನಗದು ಬಹುಮಾನ ಮತ್ತು ನೆನಪಿನ ಕಾಣಿಕೆ ನೀಡಿ ಚಂದನಾಳನ್ನು ಪ್ರಶಂಸಿಸಿದರು. ಹಾಸನ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕಗಳಿಸಿದ ಚಂದನಾಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದೆ. ಅ.12 ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯಲ್ಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರಿಂದ ಚಂದನಾ ಪ್ರಶಸ್ತಿ ಸ್ವೀಕರಿಸಲಿದ್ದಾಳೆ.
ಗವಿಕಟ್ಟೆ ನಿರ್ಮಾಣ ಕಾಮಗಾರಿಗೆ ಚಾಲನೆ
ಚನ್ನರಾಯಪಟ್ಟಣ: ತಾಲೂಕಿನ ಗೊಲ್ಲರಹೊಸಹಳ್ಳಿಯಲ್ಲಿ ಜಲಾನಯನ ಇಲಾಖೆಯಿಂದ 5 ಕೋಟಿ 8 ಲಕ್ಷ ರು. ವೆಚ್ಚದಲ್ಲಿ ಗವಿಕಟ್ಟೆ ನಿರ್ಮಾಣಕ್ಕೆ ಶಾಸಕ ಸಿ. ಎನ್. ಬಾಲಕೃಷ್ಣ ಪೂಜೆ ಸಲ್ಲಿಸಿ ಕಾಮಗಾರಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಈ ಭಾಗದಲ್ಲಿ ಅಂತರ್ಜಲ ಕೊರತೆಯಾಗಿದ್ದು 23 ಹಳ್ಳಿಗಳಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಈ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಯೋಜನೆಯಿಂದ ಸುತ್ತಮುತ್ತಲ ಗ್ರಾಮಸ್ಥರಿಗೆ ಅನುಕೂಲವಾಗುತ್ತದೆ. ಸಾಮಾಜಿಕ ಅರಣ್ಯ, ಪಶುಸಂಗೋಪನೆ, ತೋಟಗಾರಿಕೆ ವತಿಯಿಂದ ಜನ ಜಾಗೃತಿ ಕಾರ್ಯಕ್ರಮ ನಡೆಯಲಿದ್ದು ಇದನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದರು. ಡಿಎಲ್ಡಿಬಿ ಅಧಿಕಾರಿ ಮಲ್ಲಪ್ಪ, ಗ್ರಾಪಂ ಅಧ್ಯಕ್ಷೆ ಸವಿತಾ, ನಾಗೇಶ್, ಮಂಜು ಇತರರು ಇದ್ದರು.
ಶಿಕ್ಷಕರ ದಿನಾಚರಣೆ
ಹಾಸನ: ಬಸವರಾಜೇಂದ್ರ ಪ್ರೌಢ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ನಡೆಯಿತು. ಸೋಮಶೇಖರ ಸ್ವಾಮೀಜಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಶಿಕ್ಷಕರು ಮಕ್ಕಳಿಗೆ ಬೆಳಕಿನ ಕಿರಣದ ರೂಪದಲ್ಲಿ ಬಂದು ಮಕ್ಕಳನ್ನು ಹೂವಿನ ಮೊಗ್ಗಿಗೆ ಹೋಲಿಸಿ ಅದು ಅರಳಲು ಬೆಳಕು ಅವಶ್ಯಕ ಎಂದು ಅವರು ನುಡಿದರು. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಕಾರ್ಯದರ್ಶಿ ಆರ್. ರಾಜಶೇಖರಯ್ಯ ಮತ್ತು ಮುಖ್ಯೋಪಾಧ್ಯಾಯ ಯು.ಎಸ್. ಲೋಕೇಶ್ ಇದ್ದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸ್ವಾಗತಿಸಿದರು. ಮಾನಸ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

