ಗಾಂಧಿ, ಶಾಸ್ತ್ರೀ ತತ್ವಾದರ್ಶ ಪಾಲಿಸಿ
ಕನ್ನಡಪ್ರಭ ವಾರ್ತೆ ಅರಸೀಕೆರೆ ಅ.2
ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಅವರಂತಹ ಮಹಾತ್ಮರ ತತ್ವ, ಆದರ್ಶ ಚಿಂತನೆಗಳನ್ನು ಯುವಕರು ಮೈಗೂಡಿಸಿಕೊಳ್ಳುವ ಮೂಲಕ ಅವರ ಸಾಧನೆಯ ಹಾದಿಯಲ್ಲಿ ನಡೆದು ಅವರ ಕನಸನ್ನು ನನಸು ಮಾಡಲು ಮುಂದಾಗಬೇಕೆಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಕರೆ ನೀಡಿದರು.
ಪಟ್ಟಣದ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬುಧವಾರ ಶಿಕ್ಷಣ ಇಲಾಖೆ ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರ್ರೀ ಜನ್ಮ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸತ್ಯ ಅಹಿಂಸೆ, ತ್ಯಾಗದ ಮೂಲಕ ಈ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟು ದೊಡ್ಡ ಕೊಡುಗೆಯನ್ನೇ ನೀಡಿದ ಮಹನೀಯರ ಬದುಕು ನಮಗೆಲ್ಲ ಆದರ್ಶ ದೇಶದಲ್ಲಲ್ಲದೆ ವಿದೇಶದಲ್ಲಿಯೂ ಅವರ ಕೀರ್ತಿ ಅನಾವರಣಗೊಂಡಿದೆ. ದೇವಾನು ದೇವತೆಗಳು ಅವತಾರವೆತ್ತಿದ ಈ ನಾಡಲ್ಲಿ ಈ ಪುಣ್ಯಾತ್ಮರು ಹುಟ್ಟಿದ್ದೆ ನಮ್ಮ ಸೌಭಾಗ್ಯ ನಾವೆಲ್ಲರೂ ಅವರ ಆದರ್ಶಗಳನ್ನು ಪಾಲಿಸಿಕೊಂಡು ಹೋಗೋಣವೆಂದರು.
ಪ್ರಾಮಾಣಿಕತೆ, ದಕ್ಷ ಆಡಳಿತಕ್ಕೆ ಮತ್ತೊಂದು ಹೆಸರು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀ ಅದನ್ನು ತಮ್ಮ ಬದುಕಿನ ಉದ್ದಕ್ಕೂ ಪ್ರಾಮಾಣಿಕತೆ ಎಂದಿಗೂ ಬಿಡಲಿಲ್ಲ. ದೇಶಕ್ಕಾಗಿ ದುಡಿದರೇ ಹೊರತು ಸ್ವಾರ್ಥಕ್ಕಾಗಿ ಏನನ್ನೂ ಮಾಡಿಕೊಳ್ಳಲಿಲ್ಲ. ಅವರ ಮಕ್ಕಳು, ಮೊಮ್ಮಕ್ಕಳು ಇಂದಿಗೂ ಬಾಡಿಗೆ ಮನೆಯಲ್ಲಿ ಇದ್ದಾರೆ ಎಂದರೆ ಇದಕ್ಕಿಂತ ಇವರ ಪ್ರಾಮಾಣಿಕತೆಗೆ ಉದಾಹರಣೆ ಬೇಕಿಲ್ಲ. ಇಂತಹ ಪ್ರಾಮಾಣಿಕತೆಯನ್ನು ತೋರಿಸುವ ಮೂಲಕ ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆಂದರು.
ಗಾಂಧಿ ಜಯಂತಿಯ ಅಂಗವಾಗಿ ಅವರ ಚಿತಾಭಸ್ಮ ವಿರುವ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿಂದ ಜ್ಯೋತಿಯನ್ನು ತರುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪಟ್ಟಣದ ನಾಶಾಲೆಗಳ ಸಾವಿರಾರು ವಿದ್ಯಾರ್ಥಿಗಳು ಗಾಂಧೀಜಿ ಮತ್ತು ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸೂಚಿಸಲಾಯಿತು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಬಿಳಿಚೌಡಯ್ಯ, ತಾಪಂ ಅಧ್ಯಕ್ಷ ಎಚ್.ಟಿ.ಶಿವಮೂರ್ತಿ, ರಾಮಯ್ಯ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಆರ್.ಅನಂತಕುಮಾರ್, ಪುರಸಭಾಧ್ಯಕ್ಷ ಮೋಹನ್ಕುಮಾರ್, ಸದಸ್ಯರಾದ ಪಾರ್ಥಸಾರಥಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ನಟರಾಜ್, ಉಪಪ್ರಾಂಶುಪಾಲ ರೇಣುಕಾ, ಶಿಕ್ಷಕರು ಇದ್ದರು. ಶಾಲಾ ಮಕ್ಕಳಿಂದ ಸರ್ವಧರ್ಮ ಪ್ರಾರ್ಥನೆ ನಡೆಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

