ಜಿಲ್ಲೆಗೆ ಸಿಎಂ ಭೇಟಿ: ಪೂರ್ವಭಾವಿ ಸಿದ್ಧತೆ
ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 8 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸಿದ್ಧತೆ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಈ ಬಗ್ಗೆ ಪೂರ್ವಭಾವಿ ಸಭೆ ನಡೆಸಿದ ಅವರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಲಿದ್ದು ಸರ್ಕಾರದ ಯೋಜನೆ ಮತ್ತು ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಪ್ರಗತಿ ಪರಿಶೀಲಿಸಲಿದ್ದಾರೆ. ಎಲ್ಲಾ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಸಿದ್ಧಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಸೂಚಿಸಿದರು.
ಮುಖ್ಯಮಂತ್ರಿಯವರು ಅಕ್ಟೋಬರ್ 8ರಂದು ಜಿಲ್ಲೆಗೆ ಆಗಮಿಸಲಿದ್ದು ಮುಂದೆ ಕೇವಲ 6 ದಿನಗಳು ಮಾತ್ರ ಬಾಕಿ ಉಳಿದಿದ್ದು ಅದರಲ್ಲಿ ಅಕ್ಟೋಬರ್ 2, 4 ಮತ್ತು 6 ರಂದು ಸಾರ್ವತ್ರಿಕ ರಜಾ ದಿನಗಳಾಗಿವೆ. ಆದರೂ ಅಕ್ಟೋಬರ್ 2ರಂದು ಸಂಜೆ ಒಳಗಾಗಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಜಿಲ್ಲೆಯ ಆರ್ಥಿಕ, ಭೌತಿಕ ಗುರಿ ಸಾಧನೆ, ಉದ್ಘಾಟನೆಗೆ, ಭೂಮಿ ಪೂಜೆಗೆ ಬಾಕಿ ಇರುವ ಕಾಮಗಾರಿಗಳ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು.
ಅವುಗಳನ್ನು ಅಕ್ಟೋಬರ್ 3ರಂದು ಪ್ರಾದೇಶಿಕ ಆಯುಕ್ತರಿಗೆ ತಲುಪಿಸಬೇಕಾಗಿದ್ದು ಆನಂತರ ಪ್ರಮುಖ ಅಂಶಗಳ ಬಗ್ಗೆ ಮುಖ್ಯಮಂತ್ರಿಯವರ ಕಚೇರಿಗೆ ಮಾಹಿತಿ ರವಾನಿಸಬೇಕಾಗಿದೆ ಎಂದು ತಿಳಿಸಿದರು.
4ರಂದು ಮಹಾಲಯ ಅಮಾವಾಸ್ಯೆ ಇರುವುದರಿಂದ ಧಾರ್ಮಿಕ ಕಾರ್ಯಗಳಿಗೆ ಅಡ್ಡಿಯಾಗಬಾರದೆಂಬುದು ತಮ್ಮ ಭಾವನೆಯಾಗಿದ್ದು 6 ಭಾನುವಾರ ಅಧಿಕಾರಿಗಳು ಕೇಂದ್ರಸ್ಥಾನದಲ್ಲೇ ಇರಲು ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

