ಮಹಾತ್ಮರ ತತ್ವದಿಂದ ದೇಶಾಭಿವೃದ್ಧಿ: ಶಾಸಕ
ಚನ್ನರಾಯಪಟ್ಟಣ: ಅಹಿಂಸಾ ಮಾರ್ಗದಿಂದ ದೇಶಕ್ಕೆ ಸ್ವಾತಂತ್ರ್ಯ ತರಬೇಕೆಂದು ಮಹಾತ್ಮ ಗಾಂಧೀಜಿ ಕನಸು ಕಂಡಿದ್ದರು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಯಿಂದ ಏರ್ಪಡಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಂತಿ ಮತ್ತು ಅಹಿಂಸಾ ಮಾರ್ಗದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮರ ಆದರ್ಶ, ತತ್ವಗಳನ್ನು ಅಳವಡಿಸಿಕೊಂಡು ದೇಶದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಹೇಳಿದರು.
ಗ್ರಾಮ ಸ್ಪರಾಜ್ಯದ ಕನಸು ಕಂಡ ಗಾಂಧೀಜಿ ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು.ಇಂದಿನ ಯುವಕರು ಗಾಂಧೀಜಿ ತತ್ವಗಳನ್ನು ಅನುಸರಿಸಿ ದೇಶದ ಉನ್ನತಿಗೆ ಶ್ರಮಿಸಬೇಕು ಎಂದು ನುಡಿದರು.
ತಹಸೀಲ್ದಾರ್ ನಟರಾಜು, ಪುರಸಭಾಧ್ಯಕ್ಷ ಮಂಜಣ್ಣ, ತಾಪಂ ಅಧ್ಯಕ್ಷೆ ಹೇಮಾವತಿ, ಮಾಜಿ ಅಧ್ಯಕ್ಷೆ ರಂಗಮ್ಮ, ವಿಜಯಶಿವಲಿಂಗಪ್ಪ, ಜಿಪಂ ಸದಸ್ಯರಾದ ಶಿವಶಂಕರ್ ಕುಂಠೆ, ತಾಪಂ ಸದಸ್ಯ ಗಂಗಾಧರ್, ಬೈರಯ್ಯ, ಕಮಲಮ್ಮ, ತಾಲೂಕು ಕಸಾಪ ಅಧ್ಯಕ್ಷ ಎಚ್.ಎನ್. ಲೋಕೇಶ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮೋಹನ್ಕುಮಾರ್, ತಹಸೀಲ್ದಾರ್ ಸೋಮಶೇಖರ್, ಸಿಪಿಐ ಶೈಲೇಂದ್ರಕುಮಾರ್ ಇನ್ನೂ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.
ರೈತ ಫಲಾನುಭವಿಗಳಿಗೆ ಕೃಷಿ ಯಂತ್ರ ವಿತರಣೆ
ಚನ್ನರಾಯಪಟ್ಟಣ: ಕೃಷಿಯನ್ನು ಸರಳಗೊಳಿಸಲು ರೈತರ ಅನುಕೂಲಕ್ಕಾಗಿ ಹಲವು ಆಧುನಿಕ ಯಂತ್ರಗಳನ್ನು ಪರಿಚಯಿಸುತ್ತಿದ್ದು, ಅದರ ಸದುಪಯೋಗ ಪಡೆಯುವಂತೆ ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ಕೃಷಿ ಇಲಾಖೆಯಿಂದ ರೈತರಿಗೆ ಆಧುನಿಕ ಯಂತ್ರೋಪಕರಣಗಳನ್ನು ಸಹಾಯಧನದಲ್ಲಿ ವಿತರಣೆ ಮಾಡಿ ಮಾತನಾಡಿದ ಅವರು, ರೈತರು ಆಧುನಿಕ ಯಂತ್ರಗಳನ್ನು ಬಳಸಿ ಹೆಚ್ಚು ಇಳುವರಿ ಪಡೆಯಲು ಸರ್ಕಾರ ಹಲವು ಸವಲತ್ತುಗಳನ್ನು ನೀಡುತ್ತಿದ್ದು ಅದರ ಸದುಪಯೋಗ ಪಡೆಯಬೇಕು ಎಂದು ಕರೆ ನೀಡಿದರು. ಜಿಪಂ ಸದಸ್ಯ ಶಿವಶಂಕರ್ ಕುಂಠೆ,ತಹಸೀಲ್ದಾರ್ ನಟರಾಜ್, ತಾಪಂ ಮಾಜಿ ಅಧ್ಯಕ್ಷೆ ರಂಗಮ್ಮ, ಪುರಸಭಾಧ್ಯಕ್ಷ ಮಂಜಣ್ಣ, Ú ಮಲ್ಲೇಶ್ಗೌಡ ಎಪಿಎಂಸಿ ಅಧ್ಯಕ್ಷ ಶ್ರೀನಿವಾಸ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

