ಹಾಸನ

ಯಗಚಿ ನದಿ ತಟದಲ್ಲಿ ಅಕ್ರಮ ಮರಳು ದಂಧೆ; ಕಡಿವಾಣಕ್ಕೆ ಆಗ್ರಹ

Published On :

ಕ.ಪ್ರ.ವಾರ್ತೆ    ಬೇಲೂರು    ಅ.2
ಯಗಚಿ ನದಿ ತಟದಲ್ಲಿ ಅಕ್ರಮ ಮರಳು ಮಾಫಿಯಾ ದಂಧೆ ವ್ಯಾಪಕವಾಗಿ ನಡೆಯುತ್ತಿದ್ದು ದಂಧೆಕೋರರ  ವಿರುದ್ಧ ಜಿಲ್ಲಾಧಿಕಾರಿ ಕೂಡಲೇ ಕ್ರಮ ಕೈಗೊಂಡು ಕಡಿವಾಣ ಹಾಕಬೇಕು ಎಂದು ಕಾಂಗ್ರೆಸ್ ಮುಖಂಡ  ಎಚ್.ಕೆ.ಜವರೇಗೌಡ ಒತ್ತಾಯಿಸಿದರು.
ತಾಲೂಕಿನ ಮಾದಿಹಳ್ಳಿ ಹೋಬಳಿ ತೆಂಡಿಗೇರಿ ಗ್ರಾಮದಲ್ಲಿ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಗಚಿ ಸೇತುವೆ ಕೆಳಭಾಗದಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ಸೇತುವೆ ಕುಸಿಯುವ ಭಯವಿದೆ ಎಂದು ನಿವಾಸಿಗಳು ಹೇಳುತ್ತಿದ್ದಾರೆ. ಜಿಲ್ಲಾಧಿಕಾರಿ ಕೂಡಲೇ ಸ್ಥಳ ಪರಿಶೀಲನೆ ನಡೆಸಿ  ಕ್ರಮ ಕೈಗೊಳ್ಳಬೇಕು ಎಂದರು. ಸರ್ಕಾರ ವೃದ್ಧಾಪ್ಯ ವೇತನ ನೀಡುವ ವೇಳೆ ಅಂಚೆ ಸಿಬ್ಬಂದಿ ಲಂಚ ಕೇಳುತ್ತಾರೆ ಎಂದು ಆರೋಪವಿದೆ. ಹಾಗೂ ತೆಂಡೆಗೇರಿ ಗ್ರಾಮ ಮೂಲಭೂತ ಸೌಲಭ್ಯದಿಂದ ವಂಚಿತವಾಗಿದ್ದು, ಶಾಸಕರ ಗಮನಕ್ಕೆ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳಲ್ಲಿ ಮಾತನಾಡಿ, ಸದ್ಯದಲ್ಲಿ ಗ್ರಾಮಕ್ಕೆ ರಸ್ತೆ ಸೌಲಭ್ಯ ಮಾಡಿಸುವ ಭರವಸೆ ನೀಡಿದರು. ಜಿಲ್ಲಾ ಕಾಂಗ್ರೆಸ್ ಮುಖಂಡ ಬಿ.ಶಿವರುದ್ರಪ್ಪ ಮಾತನಾಡಿ, ತೆಂಡಿಗೆರೆ ಗ್ರಾಮವನ್ನು ಗ್ರಾಮ ಪಂಚಾಯ್ತಿ ನಿರ್ಲಕ್ಷ್ಯದಿಂದ ಗ್ರಾಮ ಅಭಿವೃದ್ಧಿ ಸಾಧ್ಯವಾಗಿಲ್ಲ ಎಂದು ದೂರಿದರು.  ಗ್ರಾಮದ ಬಸವೇಶ್ವರ ದೇವಾಲಯಕ್ಕೆ ಮುಜರಾಯಿ ಇಲಾಖೆಯಿಂದ ಆರ್ಥಿಕ ಸಹಾಯ ದೊರೆಯುತ್ತದೆ. ಮುಖ್ಯವಾಗಿ ಗ್ರಾಮಕ್ಕೆ ರಸ್ತೆ ಸೌಲಭ್ಯ ಅವಶ್ಯವಿದೆ, ಇದನ್ನು ಶಾಸಕರ ಗಮನಕ್ಕೆ ತರಲಾಗುತ್ತದೆ ಎಂದರು. ಎಪಿಎಂಸಿ ಮಾಜಿ ಅಧ್ಯಕ್ಷ ಅಮೃತೇಗೌಡ, ಉದ್ಯಮಿ ಜಯಶಂಕರ್, ಹನಿಕೆ ಸೋಮಶೇಖರ, ಹಾರೋಹಳ್ಳಿ ಪಾಪಣ್ಣ, ಶಿವಶಂಕರ್, ಸುಮಾ, ರೂಪ, ನಾರಾಯಣಗೌಡ, ಮುನಿಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.