'3 ನ್ಯಾಯಾಲಯಗಳಿಂದ 9 ಸಾವಿರಕ್ಕೂ ಹೆಚ್ಚು ಮೊಕದ್ದಮೆ ಬಾಕಿ'
ಚನ್ನರಾಯಪಟ್ಟಣ: ತಾಲೂಕಿನ ಮೂರು ನ್ಯಾಯಾಲಯಗಳಿಂದ 9 ಸಾವಿರಕ್ಕೂ ಹೆಚ್ಚು ಮೊಕದ್ದಮೆಗಳಿದ್ದು, ಅವುಗಳಲ್ಲಿ ಶೇ.30ರಷ್ಟನ್ನು ರಾಜಿ ಸಂಧಾನದ ಮುಖೇನ ಬಗೆಹರಿಸುವ ಗುರಿ ಹೊಂದಲಾಗಿದೆ ಎಂದು ತಾಲೂಕು ಕಾನೂನು ಸೇವಾ ಸಮತಿ ಅಧ್ಯಕ್ಷ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಟಿ ದೇವರಾಜು ತಿಳಿಸಿದರು.
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಏರ್ಪಡಿಸಿದ್ದ ಹಿರಿಯ ನಾಗರಿಕರ ದಿನಾಚರಣೆ ಹಾಗೂ ಮಧ್ಯಸ್ಥಿಕೆ ಕೇಂದ್ರದಿಂದ ಆಗುವ ಉಪಯೋಗಗಳು ಕುರಿತು ಕಾನೂನು ಅರಿವು ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿ ಪಟ್ಟಣದಲ್ಲಿ ಹಿರಿಯ ಸಿವಿಲ್, ಜೆಎಂಎಫ್ಸಿ ಹಾಗೂ ಅಧಿಕ ಸಿವಿಲ್ ನ್ಯಾಯಾಲಯಗಳಲ್ಲಿ 9ಸಾವಿರಕ್ಕೂ ಅಧಿಕ ಮೊಕದ್ದಮೆಗಳಿವೆ.
ಮುಂದಿನ 40 ದಿನಗಳಲ್ಲಿ ಶೇ.30ಕ್ಕೂ ಅಧಿಕ ಮೊಕದ್ದೊಮೆಗಳನ್ನು ರಾಜಿ ಸಂಧಾನ ನಡೆಸಿ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಮೊಕದ್ದಮೆಗಳನ್ನು ಹೂಡಿರುವ ಎರಡೂ ಕಡೆಯವರನ್ನು ಕರೆಸಿ ಕೇಸುಗಳ ಬಗ್ಗೆ ಅರಿವು ಮೂಡಿಸಿ ಅವುಗಳಲ್ಲಿ ಸ್ಥಳದಲ್ಲಿಯೇ ಇತ್ಯರ್ಥ ಪಡಿಸುವಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಮುಂದಾಗಿದ್ದು, ಈ ನಿಟ್ಟಿನಲ್ಲಿ ಕಕ್ಷಿದಾರರ ಸಹಕಾರ ಅತಿ ಮುಖ್ಯವಾಗಿದೆ ಎಂದು ತಿಳಿಸಿದರು.
ಹಿರಿಯ ನಾಗರೀಕರ ಸಂಘದ ಅಧ್ಯಕ್ಷ ಎಚ್.ಎಂ ಗೌಡಯ್ಯ, ನ್ಯಾ. ಕೆ.ಮಹದೇವ್, ನ್ಯಾ. ಕೆ.ಮಹದೇವ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ವೈ.ಕೆ ಪುಟ್ಟಸ್ವಾಮಿಗೌಡ, ಸರ್ಕಾರಿ ಅಭಿಯೋಜಕ ಮೃತ್ಯುಂಜಯ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

