ರು. 10 ಲಕ್ಷ ವೆಚ್ಚದಲ್ಲಿ ಪರಿಶಿಷ್ಟ ಜನಾಂಗದ ಸಮುದಾಯ ಭವನ: ಶಾಸಕ
ಕ.ಪ್ರ.ವಾರ್ತೆ ಬೇಲೂರು ಅ.2
ಅಂದಾಜು 10 ಲಕ್ಷ ರು. ವೆಚ್ಚದಲ್ಲಿ ಪರಿಶಿಷ್ಟ ಜನಾಂಗದ ಸಮುದಾಯ ಭವನ ನಿರ್ಮಾಣ ಕೈಗೊಳ್ಳುವುದಾಗಿ ಶಾಸಕ ವೈ.ಎನ್.ರುದ್ರೇಶಗೌಡ ತಿಳಿಸಿದರು.
ಪಟ್ಟಣದಲ್ಲಿ ಮಹರ್ಷಿ ವಾಲ್ಮೀಕಿ ಸಂಘ ಉದ್ಘಾಟಿಸಿ ಮಾತನಾಡಿದ ಅವರು ಸಂಘಗಳನ್ನು ನಿರ್ಮಾಣ ಮಾಡುವುದರ ಮೂಲಕ ಜನಾಂಗದ ಅಭಿವೃದ್ಧಿಗೆ ಪೂರಕವಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗಲಿದೆ ಎಂದರು. ವಾಲ್ಮೀಕಿ ಮಹರ್ಷಿಗಳು ರಾಮಾಯಣ ಗ್ರಂಥ ಸಾರ್ವಕಾಲಿಕವಾಗಿದ್ದು, ಎಲ್ಲ ವರ್ಗದವರಿಗೂ ರಾಮಯಾಣ ಅತ್ಯಂತ ಉತ್ತಮ ಗ್ರಂಥವಾಗಿದೆ ಎಂದು ತಿಳಿಸಿದರು.
ಡಾ.ಅಂಬೇಡ್ಕರ್ ರಚನೆಯ ಸಂವಿಧಾನ ದೇಶಕ್ಕೆ ಎಷ್ಟು ಪ್ರಾಮುಖ್ಯತೆ ಎಂಬುದನ್ನು ನಾವು ತಿಳಿಯಬೇಕಿದ್ದು ಇಂತಹ ಮಹಾನ್ ಪುರುಷರು ದೇಶಕ್ಕೆ ನೀಡಿರುವ ಕೊಡುಗೆಗಳನ್ನು ಸ್ಮರಿಸುವುದು ಅಗತ್ಯವಾಗಿದೆ ಎಂದು ಹೇಳಿದರು.
ಪರಿಶಿಷ್ಟ ವರ್ಗಗಳ ಜನಾಂಗದ ಅಭಿವೃದ್ಧಿಗೆ ಸರ್ಕಾರ 50 ಲಕ್ಷ ರು. ಅನುದಾನ ಬಿಡುಗಡೆಗೊಳಿಸಿದ್ದು, ಅದರಲ್ಲಿ ತಾಲೂಕಿನ ಅಮ್ಮನಬ್ಯಾಡರಹಳ್ಳಿ, ಶೆಟ್ಟಿಹಳ್ಳಿ, ಕಿರೆಹಳ್ಳಿ ಹಾಗೂ ಇನ್ನಿತರೆ ಗ್ರಾಮಗಳಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿ, ಮಕ್ಕಳಿಗೆ ಶಿಕ್ಷಣ ನೀಡಲು ಮುಂದಾಗುವಂತೆ ಕರೆ ನೀಡಿದರು.
ಜಿಪಂ ಸದಸ್ಯೆ ಹೇಮಾವತಿಮಂಜುನಾಥ್, ಪುರಸಭೆ ಮಾಜಿ ಅಧ್ಯಕ್ಷ ಬಿ.ಸಿ.ಮಂಜುನಾಥ್, ಪುರಸಭೆ ಸದಸ್ಯ ಬಿ.ಎಲ್.ಧರ್ಮೇಗೌಡ, ಟಿ.ಎ.ಶ್ರೀನಿಧಿ, ಗಿರೀಶ್, ರವಿ ಅಣ್ಣೇಗೌಡ, ಜ್ಯೋತಿರವಿಕುಮಾರ್, ವಾಲ್ಮೀಕಿ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್, ಸಂಘದ ತಾಲೂಕು ಅಧ್ಯಕ್ಷ ಕುಮಾರನಾಯ್ಕ, ದೊರೆಯಪ್ಪ ಇತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

