ಹಾಸನ

ಹಕ್ಕು ಪತ್ರಕ್ಕೆ ಆಗ್ರಹಿಸಿ ಹುಣಸಿನಕೆರೆ ನಿವಾಸಿಗಳ ಪ್ರತಿಭಟನೆ, ಮನವಿ

Published On :

ಕ.ಪ್ರ.ವಾರ್ತೆ    ಹಾಸನ    ಅ.2
ಹಕ್ಕು ಪತ್ರ ನೀಡಲು ಆಗ್ರಹಿಸಿ ಹುಣಸಿನಕೆರೆಯ ದೇವಿಗೆರೆ ಬಡಾವಣೆ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ  ಮಂಗಳವಾರ ಪ್ರತಿಭಟನೆ ನಡೆಸಿದರು.
ಬಡಾವಣೆಯಲ್ಲಿ ಕಳೆದ 30 ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸ ಮಾಡಲಾಗುತ್ತಿದೆ. ಇಲ್ಲಿಯವರೆಗೂ ಯಾವ ಅಧಿಕಾರಿಗಳು ಅಕ್ರಮ ಸಕ್ರಮ ಮಾಡಿಕೊಟ್ಟಿಲ್ಲ. ಜಿಲ್ಲಾಧಿಕಾರಿ ಮೂಲಕ  ಖಾತೆಯನ್ನು ಮಾಡಿಕೊಡಲಾಗಿದೆ. ಮಾಜಿ ಪ್ರಧಾನಿ ದೇವೆಗೌಡರು ಮುಖ್ಯಮಂತ್ರಿಗಳಾಗಿದ್ದಾಗ ಖಾತೆಯನ್ನು ನೀಡಲಾಗಿತ್ತು.  ಅಲ್ಲದೆ ಕುಡಿಯುವ ನೀರಿನ ವ್ಯವಸ್ಥೆ, ಬೀದಿ ದೀಪ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯವನ್ನು  ಕಲ್ಪಿಸಲಾಗಿತ್ತು. ಆದರೆ  ಹಣವನ್ನು ಕಟ್ಟಲು ನಗರಸಭೆಯು ಅವಕಾಶ ನೀಡಲಿಲ್ಲ  ಎಂದು ದೂರಿದರು.
ನಮ್ಮ  ಹೆಸರಿಗೆ ಖಾತೆ ಮಾಡಿಕೊಡುವಂತೆ ಆದೇಶವಿದ್ದರೂ ಸಹ ಇಲಾಖೆಯಿಂದ ಖಾತೆ ಮಾಡಿಕೊಡದೆ ತೊಂದರೆ ನೀಡಲಾಗುತ್ತಿದೆ ಎಂದು ಆರೋಪಿಸಿದರು. ಹುಣಸಿನಕೆರೆ ಪ್ರದೇಶದಲ್ಲಿ ಹೆಚ್ಚು ಕೂಲಿ ಕಾರ್ಮಿಕರೇ  ಇರುವುದರಿಂದ ಜೀವನ ನಿರ್ವಹಣೆ ಹಾಗೂ ಕಷ್ಟದ ಪರಿಸ್ಥಿತಿಯಲ್ಲಿ ಸಿಲುಕಿದ್ದೇವೆ ಎಂದು ತಮ್ಮ ಅಳಲು ತೋಡಿಕೊಂಡರು. ಹುಣಸಿನಕೆರೆ ಪ್ರದೇಶದಲ್ಲಿ ಅನೇಕರು ಅಕ್ರಮವಾಗಿ ಮನೆಯನ್ನು ಕಟ್ಟಿಕೊಂಡು ಹಾಗೂ ಸ್ಥಳವನ್ನು ಆಕ್ರಮಿಸಿಕೊಂಡಿದ್ದಾರೆ. ಈ ಕೂಡಲೇ ಹಿಂದೆ ನೀಡಿದಂತಹ ಹಕ್ಕುಪತ್ರವನ್ನು ಪರಿಶೀಲನೆ ಮಾಡಿ ನಮಗೆ ನೀಡುವಂತೆ ಅಪರ ಜಿಲ್ಲಾಧಿಕಾರಿ ಗೋಪಾಲಕೃಷ್ಣ ಅವರಿಗೆ ಮನವಿ ಸಲ್ಲಿಸಿದರು.  ಪ್ರತಿಭಟನೆಯಲ್ಲಿ ಚಂದ್ರಶೇಖರ್, ಪ್ರವೀಣ್, ಮಂಜುನಾಥ್, ಗುರು, ಮೋಹನ್ ಕುಮಾರ್, ಸತೀಶ್, ಸುರೇಶ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.