ಹಾಸನ

ಮಾತೃಭೂಮಿ ಉಚಿತ ವೃದ್ಧಾಶ್ರಮ ಉದ್ಘಾಟನೆ

Published On :

ಚನ್ನರಾಯಪಟ್ಟಣ: ಮಾತೃಭೂಮಿ ಉಚಿತ ವೃದ್ಧಾಶ್ರಮದ ಉದ್ಘಾಟನಾ ಕಾರ್ಯಕ್ರಮ ಪಟ್ಟಣದ ಬಿಪಿಎಡ್ ಕಾಲೇಜು ಆವರಣದಲ್ಲಿ ನೊಣವಿನ ಕೆರೆ ಕಾಡುಸಿದ್ದೇಶ್ವರ ಮಠದ ಕರಿಬಸವ ದೇಶೀ ಕೇಂದ್ರ ಶಿವಯೋಗೇಶ್ವರ ಮಹಾಸ್ವಾಮೀಜಿ ಸಮ್ಮುಖದಲ್ಲಿ ನಡೆಯಿತು.
  ಪರದೇಶಿ ರಾಮಯ್ಯ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿದರು. ಶ್ರೀಗಳು ಮಾತನಾಡಿ ಈಗಿನ ಕಾಲದಲ್ಲಿ ತಂದೆ ತಾಯಿಯನ್ನು ಸಾಕಲು ಹಿಂಜರಿಯುವಂತಹ ಮಕ್ಕಳಿದ್ದಾರೆ. ಅಂತಹ ತಾಯಿ ತಂದೆಯರು ಇಂತಹ ವೃದ್ಧಾದ್ಧಾಶ್ರಮಗಳಿಗೆ ಬಂದು ತಮ್ಮ ಜೀವನವನ್ನು ಕಳೆಯುತ್ತಾರೆ ಎಂದು ಹೇಳಿದರು.
 ನುಗ್ಗೇಹಳ್ಳಿ ಹಿರೇಮಠದ ಮಹೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ,  ಕತ್ರಿಘಟ್ಟ ಮೆಳೆಯಮ್ಮ ಆಧ್ಯಾತ್ಮಿಕ ಕೇಂದ್ರದ ಚಂದ್ರಶೇಖರ ಗುರೂಜಿ, ಸಕಲೇಶ್ವರ ಆಶ್ರಮದ ಜಯಾನಮದಯೋಗಿ ಸ್ವಾಮೀಜಿ, ವಿಠಲದಾಸರು, ಜಿಪಂ ಅಧ್ಯಕ್ಷೆ ಅಂಬಿಕಾ ರಾಮಕೃಷ್ಣ, ತಾಲೂಕು ಕಸಾಪ ಅಧ್ಯಕ್ಷ  ಲೋಕೇಶ್, ನೌಕರರ ಸಂಘದ ತಾಲೂಕು ಅಧ್ಯಕ್ಷ  ಮೋಹನ್ಕುಮಾರ್, ವಂದೇಮಾತರಂ ಸೇವಾ ಟ್ರಸ್ಟ್ ಅಧ್ಯಕ್ಷೆ ವಿಜಯ ನಾಗಣ್ಣ, ಜೈಹಿಂದ್ ಮಾತೃಭೂಮಿ ವೃದ್ಧಾಶ್ರಮದ ಕಾರ್ಯದರ್ಶಿ ವಿಕ್ರಮ್, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾನಿಲಯ ಮೋಹನ ಕುಮಾರಿ,  ತಾಪಂ ಅಧ್ಯಕ್ಷೆ ಹೇಮಾವತಿ, ವಂದೇ ಮಾತರಂ ಅಧ್ಯಕ್ಷೆ ಕೃಪಾ, ಕಮಲಮ್ಮ, ವಂದೇ ಮಾತರಂ ಸೇವಾ ಟ್ರಸ್ಟ್ ಗೌರವಾಧ್ಯಕ್ಷ ಇತರರು ಇದ್ದರು. ಇದೇ ವೇಳೆ  ಕುಮಾರಿ ದೀಕ್ಷಾಳಿಂದ ಅಮೋಘ ಭರತನಾಟ್ಯ ಕಾರ್ಯಕ್ರಮ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.