ಚನ್ನರಾಯಪಟ್ಟಣದಲ್ಲಿ ವಿಜ್ಞಾನ ವಸ್ತು ಪ್ರದರ್ಶನ
ಚನ್ನರಾಯಪಟ್ಟಣ: ತಾವಿಂದು ವೈಜ್ಞಾನಿಕವಾಗಿ ಹೆಚ್ಚಿನ ಮಹತ್ವ ನೀಡುತ್ತಿರುವುದರಿಂದ ಹೆಚ್ಚಿನ ಸಾಧನೆಯಾಗುತ್ತಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ಪಟ್ಟಣದ ಹೇಮಾವತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಮಾತನಾಡಿದ ಅವರು, ಇಂದಿನ ದಿನಕ್ಕೆ ವಿಜ್ಞಾನ ಅತ್ಯವಶ್ಯಕವಾಗಿದ್ದು, ಅದನ್ನು ಒಳಿತಿಗೆ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು. ತಮ್ಮ ಆಂತರಿಕ ಸಮಸ್ಯೆಯನ್ನು ಮುಂದಿಟ್ಟುಕೊಂಡು ವಿಜ್ಞಾನವನ್ನು ದುರುಪಯೋಗ ಮಾಡಿಕೊಳ್ಳದೆ ದೇಶದ ಹಿತಕ್ಕಾಗಿ ಉತ್ತಮ ಸಾಧನೆಯನ್ನು ಮಾಡಿ ದೇಶದ ಪ್ರಗತಿಗೆ ಕಾರಣರಾಗಬೇಕು ಎಂದು ತಿಳಿಸಿದರು.
ವೈಜ್ಞಾನಿಕ ಸಂಶೋಧನೆಗಳನ್ನು ತಿಳಿದು ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ತಿಳಿದು ಉತ್ತಮ ದರ್ಜೆಯಲ್ಲಿ ತೇರ್ಗಡೆಯಾಗಬೇಕೆಂದು ಕರೆ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡು ಮಾತನಾಡಿ ತಾಲೂಕು ಮಟ್ಟದ ವಸ್ತು ಪ್ರದರ್ಶನದಲ್ಲಿ 4ಬ್ಲಾಕ್ಗಳಾಗಿ ವಿಂಗಡಿಸಿ ಪ್ರತಿ ಬ್ಲಾಕ್ನಿಂದ ಇಬ್ಬರನ್ನು ಆಯ್ಕೆ ಮಾಡಿ ತಾಲೂಕಿನಿಂದ 8ಮಂದಿ ಪ್ರತಿಭಾನ್ವಿತರನ್ನು ಜಿಲ್ಲಾ ಮಟ್ಟಕ್ಕೆ ಕಳುಹಿಸಲಾಗುವುದು ಎಂದು ಹೇಳಿದರು. ಶಿಕ್ಷಣ ಇಲಾಖೆಯ ಭಾಗ್ಯಮ್ಮ, ಸಿದ್ದಲಿಂಗಪ್ಪ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

