ಪಂಪ್ಸೆಟ್ಗಳಿಗೆ ವಿದ್ಯುತ್ ನೀಡಲು ಅನಧಿಕೃತ ಕಾಮಗಾರಿ
ಬೇಲೂರು: ಇಲಾಖೆ ಗಮನಕ್ಕೆ ಬಾರದೆ ಕೆಲ ಲೈನ್ಮನ್ಗಳು ಅನಧಿಕೃತವಾಗಿ ವಿದ್ಯುತ್ ಕಾಮಗಾರಿ ನಡೆಸಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ವರದಿ ನೀಡುವುದಾಗಿ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಯೋಗೇಶ್ ತಿಳಿಸಿದರು.
ಪಟ್ಟಣದ ಜೆ.ಪಿನಗರ, ಲಕ್ಷ್ಮಿಪುರ ಮತ್ತು ಕಿರೆಹಳ್ಳಿ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿ ಪರಿಶಿಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನ ಕಿರೇಹಳ್ಳಿ ಗ್ರಾಮದಲ್ಲಿ ಕೆಲ ಗುತ್ತಿಗೆದಾರರು ಮತ್ತು ಕೆಇಬಿ ಲೈನ್ಮೆನ್ಗಳು ಶಾಮೀಲಾಗಿ ರೈತರ ಪಂಪ್ಸೆಟ್ಗಳಿಗೆ ವಿದ್ಯುತ್ ನೀಡಲು ಕಾಮಗಾರಿ ನಡೆಸಿದ್ದು ವಿದ್ಯುತ್ ಕಾಮಗಾರಿಗೆ ಉಪಯೋಗಿಸಿದ್ದ ವಸ್ತುಗಳನ್ನು ತೆರವುಗೊಳಿಸುವಂತೆ ಇಲಾಖೆ ಎಂಜಿನಿಯರ್ಗಳಿಗೆ ಸೂಚಿಸಿದರು.
ಲೈನ್ಮನ್ಗಳು ಕೆಲ ಗುತ್ತಿಗೆದಾರರ ಜತೆ ಶಾಮೀಲಾಗಿ ಇಲಾಖೆಗೆ ತಿಳಿಸದೆ ವಿದ್ಯುತ್ ಸಂಪರ್ಕದ ಕೆಲಸಗಳನ್ನು ನಿರ್ವಹಿಸುತ್ತಿದ್ದು ಈ ಬಗ್ಗೆ ಸಾರ್ವಜನಿಕರು ಹಾಗು ಗುತ್ತಿಗೆದಾರರ ಸಂಘದವರು ದೂರು ನೀಡಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿದ್ದು, ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿದ ನಂತರ ಕ್ರಮಕೈಗೊಳ್ಳಲಾಗುವುದು ಎಂದರು.ಎಇಇ ಮಲ್ಲಿಕಾರ್ಜುನ್, ಎ.ಇ.ಮಹದೇವ್, ಬಸವರಾಜ ಗುತ್ತಿಗೆದಾರರ ಸಂಘದ ಕಾರ್ಯದರ್ಶಿ ಚಂದ್ರಶೇಖರಯ್ಯ, ಕೃಷ್ಣೇಗೌಡ, ರವಿ, ಮಂಜುನಾಥ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

