ಹಾಸನ

ವಿವೇಕಾನಂದರ 150ನೇ ಜನ್ಮ ವರ್ಷಾಚರಣೆ

Published On :

ಚನ್ನರಾಯಪಟ್ಟಣ: ಸ್ವಾಮಿ ವಿವೇಕಾನಂದರ ವಿಚಾರಗಳು ವಿದ್ಯಾರ್ಥಿಗಳಿಗೆ ಚೈತನ್ಯ ತುಂಬುತ್ತವೆ ಎಂದು ಹಾಸನದ ವಾಗ್ಮಿ ಚಿಂತಕ ಹರಿಹರಪುರದ  ಶ್ರೀಧರ್ ಹೇಳಿದರು. ಪಟ್ಟಣದ ಶಿವಜ್ಯೋತಿ ಕಲ್ಯಾಣ ಮಂಟಪದಲ್ಲಿ ಸ್ವಾಮಿ ವಿವೇಕಾನಂದರ 150ನೇ ಜನ್ಮ ವರ್ಷಾಚರಣೆ ಹಾಗೂ ಯುವ ಸಮಾವೇಶ ಉದ್ಘಾಟಿಸಿ ಮಾತನಾಡಿ, ಭಾರತದ ದೇಶ ಸಂಸ್ಕೃತಿಯನ್ನು ಸಾರುವಲ್ಲಿ ವಿಶ್ವಗುರು ಆಗಿತ್ತು. ಇದೀಗ ಬದಲಾದ ಸನ್ನಿವೇಶದಲ್ಲಿ ಸ್ವಾಮಿ ವಿವೇಕಾನಂದರ ಆದರ್ಶ ಚಿಂತನೆಗಳನ್ನು ಯುವ ಜನಾಂಗಕ್ಕೆ ತಿಳಿಸಿಕೊಡಬೇಕಾಗಿದೆ ಎಂದರು. ಶಿವಾಜಿ, ಆದಿಶಂಕರಚಾರ್ಯ, ಡಾ. ಬಿ. ಆರ್. ಅಂಬೇಡ್ಕರ್ ಸೇರಿದಂತೆ ಎಲ್ಲಾ ಮಹಾತ್ಮರನ್ನು ಸ್ವಾಮಿ ವಿವೇಕಾನಂದರಲ್ಲೇ ಕಾಣಬಹುದು ಎಂದು ಹೇಳಿದರು. ಆದಿಚುಂಚನಗಿರಿ ಪದವಿ ಕಾಲೇಜಿನ ಉಪನ್ಯಾಸಕ ನಾಗಣ್ಣ ಅಧ್ಯಕ್ಷತೆ ವಹಿಸಿದ್ದರು. ಸಂಘದ ಸಂಚಾಲಕ  ಡಾ. ಸಿ.ಎಸ್. ಶೇಷಶಯನ, ಆನಂದ್, ಕೃಷ್ಣಮೂರ್ತಿ, ಬಿ.ಟಿ. ರಘು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.