ಹಾಸನ

ಗಾಂಧಿ ಜಯಂತಿ ಅಂಗವಾಗಿ ಶ್ರಮದಾನ

Published On :

ಹೊಳೆನರಸೀಪುರ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಇತ್ತೀಚೆಗೆ ಗಾಂಧಿ ಜಯಂತಿ ಆಚರಣೆಯ ಅಂಗವಾಗಿ ತಾಲೂಕಿನ ಕಡವಿನಹೊಸಹಳ್ಳಿ ಗ್ರಾಮದಲ್ಲಿ ಶ್ರಮದಾನ ಕಾರ್ಯಕ್ರಮವನ್ನು  ಹಮ್ಮಿಕೊಳ್ಳಲಾಗಿತ್ತು.
ಕಡವಿನಹೊಸಹಳ್ಳಿಯ ಬಸವೇಶ್ವರ ಪ್ರಗತಿ ಬಂಧು ತಂಡ ಹಾಗೂ ನಂಜುಂಡೇಶ್ವರ ಸ್ವಸಹಾಯ ಸಂಘಗಳ ಸದಸ್ಯರು ಗ್ರಾಮದಲ್ಲಿನ ಬಸವೇಶ್ವರ ಹಾಗೂ ಆಂಜನೇಯ ದೇವಾಲಯಗಳ ಸುತ್ತಮುತ್ತಲಿನ ಗಿಡಗಂಟಿಗಳನ್ನು ಕಿತ್ತು ಸ್ವಚ್ಛಗೊಳಿಸುವ ಮೂಲಕ ಶ್ರಮದಾನ ಕೈಗೊಂಡರು.
ಈ ಸಂದರ್ಭದಲ್ಲಿ ಬಾಗೀವಾಳು ಗ್ರಾಪಂ ಸದಸ್ಯೆ ಜಯಂತಿ ಸೋಮಶೇಖರ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಕನಸಿನ ಗ್ರಾಮ ಸ್ವಚ್ಛತಾ ಕಾರ್ಯವಾಗಿದ್ದು, ಶ್ರಮದಾನದ ಮೂಲಕ ಸಂಘಗಳು ಗ್ರಾಮಗಳ ನೈರ್ಮಲ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ ಸಂಗತಿ ಎಂದರು.
ಯೋಜನೆಯ ಕೃಷಿ ಅಧಿಕಾರಿ ಚಂದ್ರಪ್ಪ ಮಾತನಾಡಿ, ದುಶ್ಚಟ ಮುಕ್ತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಕೈಗೊಂಡಿರುವ ಬಹುಮುಖ್ಯವಾದ ಜನಜಾಗೃತಿಯ ಮುಖೇನ ದುಶ್ಚಟಗಳಿಂದ ಉಂಟಾಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಯೋಜನೆಯ ಮೂಲಕ ಕೈಗೊಳ್ಳಲಾಗಿದೆ ಎಂದರು.
ಅಲ್ಲದೇ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗಾಗಿ ಸ್ವಾಸ್ಥ್ಯ ಸಂಕಲ್ಪ ಮತ್ತು ಪರಿಸರ ರಕ್ಷಣೆ ಮತ್ತು ನಾಗರಿಕ ಪ್ರಜ್ಞೆ ದಿನಗಳನ್ನು ಆಚರಿಸುವ ಮೂಲಕ ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ಯೋಜನೆಯು ಮಾಡುತ್ತಿದೆ ಎಂದರು.
ಈ ಸಂದರ್ಭದಲ್ಲಿ ಬಸವೇಶ್ವರ ಪ್ರಗತಿಬಂಧು ರೈತರ ತಂಡದ ಮಲ್ಲೇಶ್ ಸ್ವಾಗತಿಸಿದರು. ಯೋಜನೆಯ ಮೇಲ್ವಿಚಾರಕಿ ನಾಗರತ್ನ ನಿರೂಪಿಸಿದರು. ಸೇವಾ ಪ್ರತಿನಿಧಿ ಬಿಂಧು ವಂದಿಸಿದರು. ಗ್ರಾಮಸ್ಥರು ಕೂಡ ಈ ಸಂದರ್ಭದಲ್ಲಿ ಶ್ರಮದಾನ ಕಾರ್ಯಕ್ಕೆ ಕೈಜೋಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.