ಜಿಲ್ಲಾ ಅಲ್ಪಸಂಖ್ಯಾತ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ
ಹೊಳೆನರಸೀಪುರ: ರಾಜ್ಯ ಸರ್ಕಾರ ಇತರೆ ಶಾಲೆಗಳಂತೆಯೇ ಉರ್ದು ಶಾಲೆಗಳಿಗೂ ಹೆಚ್ಚಿನ ಪ್ರೋತ್ಸಾಹ ಹಾಗೂ ಸೌಲಭ್ಯಗಳನ್ನು ಒದಗಿಸಿಕೊಡುವ ಮೂಲಕ ಸಮಾನತೆಯ ಶಿಕ್ಷಣ ನೀತಿಯನ್ನು ಅನುಸರಿಸುವಂತೆ ಜಿಪಂ ಸದಸ್ಯ ಎಚ್.ಎನ್.ದೇವೇಗೌಡ(ಪಾಪಣ್ಣಿ) ಒತ್ತಾಯಿಸಿದರು.
ಪಟ್ಟಣದ ಶಾದಿಮಹಲ್ನಲ್ಲಿ ಶಿಕ್ಷಣ ಇಲಾಖೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಅಲ್ಪಸಂಖ್ಯಾತ ಶಾಲಾ ಶೈಕ್ಷಣಿಕ ಹಾಗೂ ಸಾಂಸ್ಕತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಹಾಗೂ ಸಮಾಜ ಏನೇ ಪ್ರೋತ್ಸಾಹವನ್ನು ನೀಡಿದರೂ ಮುಸ್ಲಿಂ ಸಮುದಾಯದ ಬಹುತೇಕ ಪೋಷಕರು ವಿವಿಧ ಕಾರಣಗಳಿಂದಾಗಿ ತಮ್ಮ ಮಕ್ಕಳಿಗೆ ಇತರೆ ವರ್ಗದ ಮಕ್ಕಳಂತೆ ಕಡ್ಡಾಯ ಶಿಕ್ಷಣವನ್ನು ಕೊಡಿಸುವಲ್ಲಿ ಹಿಂದೆ ಬಿದ್ದಿದ್ದಾರೆ ಎಂದು ವಿಷಾದಿಸಿದರು.
ವಕ್ಫ ಬೋರ್ಡ್ ಸಮಿತಿ ಜಿಲ್ಲಾಧ್ಯಕ್ಷ ಸೈಯದ್ ಖಾಸಿಂ ಮಾತನಾಡಿದರು. ತಾಪಂ ಸದಸ್ಯೆ ಕೆ.ಎಂ.ಚಂದ್ರಮತಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಯೋಗೇಶ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಉರ್ದು ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅವೇಜಪಾಶಾ ಇದ್ದರು. ತಾಪಂ ಅಧ್ಯಕ್ಷೆ ಕೆ.ಎಂ.ಪುಷ್ಪಾಗೌಡೇಗೌಡ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಯಾಸ್ಮಿನ್ತಾಜ್
ಖುರಾನ್ ಪಠಿಸಿದರು. ಅಬ್ದುಲ್ರೆಹಮಾನ್ ಪ್ರಾರ್ಥನೆ(ನಾಥ್) ಮಾಡಿದರು, ಶಿಕ್ಷಣ ಸಂಯೋಜಕ ಶಂಶುಲ್ಲಾ ಸ್ವಾಗತಿಸಿದರು. ಖಾದ್ರಿ ಕಾರ್ಯಕ್ರಮ ಉಸ್ತುವಾರಿ ಹೊತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

