52 ಕೆರೆಗಳ ಅಭಿವೃದ್ಧಿ: ಶಾಸಕ ಕುಮಾರಸ್ವಾಮಿ
ಸಕಲೇಶಪುರ: ತಾಲೂಕಿನ 52 ಕೆರೆಗಳನ್ನು 10 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಎಚ್. ಕೆ. ಕುಮಾರಸ್ವಾಮಿ ಹೇಳಿದರು.
ಇತ್ತೀಚೆಗೆ ತಾಲೂಕಿನ ಬನವಾಸೆ ಊರುಬಾಗಿಲು ಕೆರೆ ಅಭಿವೃದ್ಧಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ 32 ಲಕ್ಷ ವೆಚ್ಚದಲ್ಲಿ ಬನವಾಸೆ ಕೆರೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದ್ದು, ಸರಿಯಾಗಿ ಕೆರೆ ಅಭಿವೃದ್ಧಿಗೊಳ್ಳಬೇಕಾದರೆ ಗ್ರಾಮಸ್ಥರ ಸಹಕಾರ ಅಗತ್ಯ ಎಂದರು.
ಕಳೆದ ಹಲವು ಶತಮಾನಗಳ ಇತಿಹಾಸವಿರುವ ಕೆರೆಯನ್ನು ಉತ್ತಮವಾಗಿ ಅಭಿವೃದ್ಧಿಪಡಿಸಿದರೆ ಮುಂದಿನ ಹಲವು ತಲೆಮಾರು ನೀರಿನ ಕೊರತೆ ಎದುರಾಗುವುದಿಲ್ಲ. ಆದ್ದರಿಂದ ಇಂತಹ ಅತ್ಯುತ್ತಮ ಕೆಲಸಕ್ಕೆ ಗ್ರಾಮಸ್ಥರು ಬಾಗಿಗಳಾಗಬೇಕು ಎಂದರು. ಗಾಂಧೀಜಿ ಹುಟ್ಟುಹಬ್ಬದಂದು ರಾಜ್ಯಾದ್ಯಂತ ಕೆರೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿರುವುದು ಅರ್ಥಪೂರ್ಣವಾಗಿದೆ. ಗಾಂಧೀಜಿ ಕನಸಿನಂತೆ ಗ್ರಾಮಗಳ ಅಭಿವೃದ್ಧಿಯಾಗದ ಹೊರತು ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಇದರಿಂದಾಗಿ ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕೆರೆಗಳ ಅಭಿವೃದ್ಧಿ ಅತಿಮುಖ್ಯವಾಗಿದೆ ಎಂದರು.
ಜಿಪಂ ಮಾಜಿ ಉಪಾಧ್ಯಕ್ಷೆ ಸುಲೋಚನಾ ರಾಮಕೃಷ್ಣ ಮಾತನಾಡಿ, ಮಳೆ ಕೊರತೆ ಎದುರಿಸುತ್ತಿರುವ ಈ ದಿನಗಳಲ್ಲಿ ನೀರು ಸಂರಕ್ಷಣೆ ಅತಿಮುಖ್ಯವಾಗಿದೆ. ಆದ್ದರಿಂದ, ಕೆರೆಗಳ ಅಭಿವೃದ್ಧಿ ಹಾಗೂ ಕೆರೆ ಒತ್ತುವರಿ ತೆರವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಅತಿ ಅಗತ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯ್ತಿ ಅಧ್ಯಕ್ಷೆ ಮಂಜುಳಾ, ಬಾಳ್ಳುಪೇಟೆ ಗ್ರಾಪಂ ಅಧ್ಯಕ್ಷ ಪರಮೇಶ್, ಬಾಗೇ ಗ್ರಾಪಂ ಅಧ್ಯಕ್ಷ ನೀಲಕಂಠ, ಮುಖಂಡರದ ರಾಮಕೃಷ್ಣ,ದ್ಯಾವಪ್ಪಗೌಡ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

