ಹಾಸನ

ಬೇಲೂರಿನಲ್ಲಿ ಇಂದು ಆಳ್ವಾಸ್ ಸಾಂಸ್ಕೃತಿಕ ವೈಭವ

Published On :

ಬೇಲೂರು: ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ ತಾಲೂಕು ಘಟಕದ ಉದ್ಘಾಟನೆ ಹಾಗೂ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮವನ್ನು ಅ.5ರಂದು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಘಟಕ ಅಧ್ಯಕ್ಷ ಕೆ. ಸುದರ್ಶನ್ ಹೇಳಿದರು.
ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಇದೇ ಮೊದಲ ಬಾರಿಗೆ ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ ಘಟಕವನ್ನು ಉದ್ಘಾಟನೆ ಮಾಡಲಾಗುತ್ತಿದೆ. ಕಾರ್ಯಕ್ರಮವನ್ನು ಅ.5ರಂದು ಸಂಜೆ 5.30ಕ್ಕೆ ಆರಂಭಗೊಳ್ಳಲಿದೆ. ವಿಶ್ವವಿಖ್ಯಾತ ಬೇಲೂರು ಚನ್ನಕೇಶವಸ್ವಾಮಿ ದೇಗುಲದ ಮುಂಭಾಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 175ಕ್ಕೂ ಹೆಚ್ಚು ಪ್ರತಿಭಾವಂತ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದ್ದು, ಮೋಹಿನಿ ಅಟ್ಟಂ, ಆಂಧ್ರದ ಬಂಜಾರಾ, ಶ್ರೀಲಂಕಾದ ಕ್ಯಾಂಡಿಯನ್, ಕರ್ನಾಟಕ ಭರತನಾಟ್ಯ ನವ ದುರ್ಗೆಯರು, ಮಣಿಪುರದ ಡೋಲ್ ಚಲಮ್, ತೆಂಕತಿಟ್ಟು ಯಕ್ಷಗಾನ, ಕೇರಳದ ಒಪ್ಪಣಂ, ಪ. ಬಂಗಾಳ ಪುರುಲಿಯಾ ಸಿಂಹದ ಭೇಟೆ, ಕಥಕ್ ಸಮ್ಮೋಹನಂ ಮೊದಲಾದ ಬೆರಗು ಮೂಡಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಘಟಕದ ಪ್ರಧಾನ ಕಾರ್ಯದರ್ಶಿ ಸಾ.ರಾ. ಮಹೇಶ್ ಮಾತನಾಡಿದರು. ಗೌರವಾಧ್ಯಕ್ಷ ಜಿ.ಕೆ. ಕುಮಾರ್, ಉಪಾಧ್ಯಕ್ಷ ಬಿ.ಎನ್. ಆನಂದ್ ಸಂಘಟನಾ ಕಾರ್ಯದರ್ಶಿ ವಿಕ್ರಮ್ ಕರಿ, ಸಿ.ಎಚ್. ಮಹೇಶ್, ಬೆಣ್ಣೂರು ಪೂರ್ಣೇಶ್, ಕಾರ್ಯದರ್ಶಿ ಚಂದ್ರಶೇಖರಪ್ಪ, ನಿರ್ದೇಶಕ ಅನಂತರಾಜೇ ಅರಸ್, ಇತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.