ನಾನಾ ಬೇಡಿಕೆ ಈಡೇರಿಕೆಗೆ ಕಾಂಗ್ರೆಸ್ ಎಸ್ಟಿ ಘಟಕ ಒತ್ತಾಯ
ಹಾಸನ: ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಪಂಗಡ ಘಟಕ ಕಾರ್ಯಕರ್ತರು ಶನಿವಾರ ನಗರದಲ್ಲಿ ಶಾಂತಿಯುತ ಮೆರವಣಿಗೆ ನಡೆಸಿ ನಂತರ ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡ ಜನಾಂಗದವರು 1 ಲಕ್ಷ ಮೀರಿದ್ದು, ಈ ಜನಾಂಗಕ್ಕೆ ಸೇರಿದ ಮೇದರು, ಅಕ್ಕಿಪಿಕ್ಕಿ, ಮರಾಠಿ, ವಾಲ್ಮಿಕಿ ನಾಯಕರಿದ್ದಾರೆ. ಗಿರಿಜನ ಉಪ ಯೋಜನೆಯಡಿಯಲ್ಲಿ ಬರುವ ಪ್ರವಾಸೋದ್ಯಮ ಇಲಾಖೆಯಲ್ಲಿ ಕಾರುಗಳನ್ನು ನೀಡುತ್ತಿದ್ದು, ಕಾರುಗಳ ಸಂಖ್ಯೆ ಕೇವಲ 2ರಿಂದ 3 ಮಾತ್ರ ಇದೆ. ಈ ಸಂಖ್ಯೆಯನ್ನು 8ರಿಂದ 10ಕ್ಕೆ ಏರಿಕೆ ಮಾಡಬೇಕು ಎಂದರು. ಕೇಂದ್ರ ಸರ್ಕಾರದ ನೀತಿಯಂತೆ ಪರಿಶಿಷ್ಟ ಪಂಗಡದ ಮೀಸಲು ಪ್ರಮಾಣವನ್ನು 8ರಿಂದ 10ಕ್ಕೆ ಏರಿಕೆ ಮಾಡಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ನಾನಾ ಇಲಾಖೆಗಳಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣವನ್ನು ಸರ್ಕಾರಕ್ಕೆ ವಾಪಸ್ ಹೋಗುತ್ತಿದೆ. ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮವನ್ನು ಪ್ರತ್ಯೇಕವಾಗಿಯೇ ಉಳಿಸಬೇಕು. ನಿಗಮ ಮಂಡಳಿಯಲ್ಲಿ ಪರಿಶಿಷ್ಟ ಪಂಗಡದವರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರ ನೇಮಕಾತಿ ಮಾಡಬೇಕು. ಪಂಗಡದ ಫಲಾನುಭವಿಗಳಿಗೆ ಬ್ಯಾಂಕ್ಗಳಲ್ಲಿ ಸಾಲಕ್ಕೆ ಹೆಚ್ಚಿನ ಅಗತ್ಯತೆ ಕೊಡಬೇಕು. ಈ ಎಲ್ಲಾ ಅಂಶಗಳನ್ನು ಇಲಾಖೆಗಳ ಮತ್ತು ಸರ್ಕಾರದ ಗಮನ ಸೆಳೆಯಲು ಜಿಲ್ಲಾ ಜನಾಂಗದ ಪರವಾಗಿ ಶಾಂತಿಯುತ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ನೀಡಿದ್ದು, ಅಧಿಕಾರಿಗಳು ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿದರು. ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷ ಚೆಲುವನಹಳ್ಳಿ ಶೇಖರಪ್ಪ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

