'ಕಾರ್ಮಿಕರಿಗೆ ಸವಲತ್ತು; ಇಲಾಖೆ ವಿಫಲ'
ಕ.ಪ್ರ.ವಾರ್ತೆ ರಾಮನಾಥಪುರ ಅ.5
ಕಾರ್ಮಿಕ ಇಲಾಖೆ ಕಾರ್ಮಿಕರಿಗೆ ಸಿಗಬೇಕಾದ ಸವಲತ್ತುಗಳನ್ನು ತಿಳಿಸಿಕೊಡುವಲ್ಲಿ ವಿಫಲವಾಗಿದೆ ಎಂದು ಅರಕಲಗೂಡಿನ ವಕೀಲ ಉದಯಕುಮಾರ್ ವಿಷಾದಿಸಿದರು.
ರಾಮನಾಥಪುರ ಪಟ್ಟಾಭಿರಾಮ ಪ್ರೌಢಶಾಲೆಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಮತ್ತು ಇತರೆ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ, ಹೊಳೆನರಸೀಪುರ ಕಾರ್ಮಿಕ ಇಲಾಖೆ, ಬಿಜಿವಿಎಸ್ ತಾಲೂಕು ಘಟಕ ಆಶ್ರಯದಲ್ಲಿ ಕಟ್ಟಡ ಕಾರ್ಮಿಕರಿಗೆ ಗುರುತಿನ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರಿಯಾದ ಮಾಹಿತಿ ಮತ್ತು ಜಾಹಿರಾತು ನೀಡುತ್ತಿಲ್ಲ. ಆದ್ದರಿಂದ ಎಲ್ಲರೂ ಸಂಘಟಿತರಾಗಿ ಕಾರ್ಮಿಕ ಇಲಾಖೆಯ ಸವಲತ್ತುಗಳನ್ನು ಪಡೆಯಬೇಕು. ಕಾರ್ಮಿಕರಿಗೆ ದೊರಕುವವಿಮಾ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಅರಕಲಗೂಡಿನ ಪಿಇಎಸ್ ಐಟಿಐ ಕಾಲೇಜಿನ ಪ್ರಾಂಶುಪಾಲ ಎಚ್.ಟಿ.ಗುರುರಾಜ್ ಮಾತನಾಡಿ, ಕಾರ್ಮಿಕರಲ್ಲಿ ಅನಕ್ಷರಸ್ಥರೇ ಅಧಿಕ ಸಂಖ್ಯೆಯಲ್ಲಿದ್ದು, 100ಕ್ಕೆ ಶೇ. 83 ರಷ್ಟು ಅಸಂಘಟಿತರಾಗಿರುವುದರಿಂದ ಇವರಿಗೆ ಸಿಗುವ ಸೌಲಭ್ಯ ಪಡೆಯಲಾಗುತ್ತಿಲ್ಲ. ಈ ದೇಶದ ಸಂಪತ್ತನ್ನು ಸೃಷ್ಟಿ ಮಾಡಿರುವವರು ನೀವು ಎಂದರು.
ಕಾರ್ಮಿಕರು ಇಲಾಖೆ ಸದಸ್ಯತ್ವ ಪಡೆದು ಕಾಲ ಕಾಲಕ್ಕೆ ಗುರುತಿನ ಚೀಟಿ ನವೀಕರಣಗೊಳಿಸಿ ಸೌಲಭ್ಯಗಳನ್ನು ಪಡೆಯುವಂತಾಗಬೇಕು ಎಂದು ಸಲಹೆ ನೀಡಿದರು. ಲಕ್ಷ್ಮೀಶ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

